ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

Date:

  • ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಸ್ಥಳ ನಿಗದಿ
  • ನಾಳೆ ಬೆಂಗಳೂರಿನಲ್ಲಿ ಮೊದಲ ಯೋಜನೆಗೆ ಚಾಲನೆ

ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರಂಟಿ ಯೋಜನೆಗಳ ಉದ್ಘಾಟನೆಗೆ ಒಂದೊಂದು ಸ್ಥಳಗಳನ್ನು ಗುರುತಿಸಲಾಗಿದೆ. ಅದರಂತೆ ಸಿದ್ದರಾಮಯ್ಯನವರ ನೆಚ್ಚಿನ ಹಾಗೂ ಪಕ್ಷದ ಪ್ರಮಖ ಯೋಜನೆಯಾದ ಅನ್ನಭಾಗ್ಯ ಯೋಜನೆ ಮೈಸೂರಿನಿಂದ ಶುಭಾರಂಭಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ವಿಚಾರದ ಬಗ್ಗೆ ಮಾಹಿತಿ ನೀಡಿ ಮೈಸೂರಲ್ಲೇ ಈ ಯೋಜನೆಗೆ ಚಾಲನೆ ನೀಡುತ್ತೇನೆ ಎಂದಿದ್ದಾರೆ.

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾಗೆ ತೆರಳುವ ಮುನ್ನ ನಂಜನಗೂಡಿನ ಸುತ್ತೂರಿನ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದೊಂದು ಯೋಜನೆ ಜಾರಿಗೆ ಒಂದೊಂದು ಊರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ನಾಳೆ ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರಕಲಿದೆ, ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಬೆಳಗಾವಿಯಲ್ಲಿ ಅನಾವರಣವಾಗಲಿದೆ, ಗೃಹಜ್ಯೋತಿ ಯೋಜನೆಯನ್ನು ಕಲಬುರಗಿಯಿಂದ ಜಾರಿ ಮಾಡಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ವರುಣಾ ತಾಲೂಕು

ವರುಣಾದ ಜನರೇ ಕ್ಷೇತ್ರವನ್ನು ತಾಲೂಕನ್ನಾಗಿಸಬೇಕು ಎಂದರೆ ಅವರ ಬೇಡಿಕೆ ಪರಿಗಣಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.

ವರುಣವನ್ನು ತಾಲೂಕನ್ನಾಗಿಸುವ ಒತ್ತಾಯವಿದೆ. ವರುಣ ಜನ ಕೇಳಿದರೆ ಇದನ್ನ ಮಾಡುತ್ತೇವೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರೆ ಮಾಡುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇಂದು ಕ್ಷೇತ್ರದಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿರುವ ಸಿಎಂ, ಇದೇ ಸಂದರ್ಭದಲ್ಲಿ ತಾಲೂಕು ಕೇಂದ್ರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...