ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ: ಬಸನಗೌಡ ಪಾಟೀಲ್ ಯತ್ನಾಳ್

Date:

ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೇ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

- Advertisement -

ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ದುಂಢಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, “ದುಂಢಸಿಯಲ್ಲಿ 19 ಎಕರೆ ಜಮೀನು ವಕ್ಪ್ ಆಸ್ತಿ ಮಾಡಿದ್ದಾರೆ. ನಾನು ವಕ್ಪ್ ಬಗ್ಗೆ ಆಗ ಮಾತನಾಡಲು ವಿಶ್ವೇಶ್ವರ್ ಹೆಗಡೆ, ಬೊಮ್ಮಾಯಿ ಕಾರಣ. ಇನ್ನೂ ಎಷ್ಟು ವರ್ಷ ಇಂದಿರಾ ಗಾಂಧಿ ಅಂತ ಹೇಳುತ್ತಿರಿ, ಜಿಲೇಬಿ ಫ್ಯಾಕ್ಟರಿ ಮಾಡುತ್ತೇನೆ. ಬಟಾಟಿಯಲ್ಲಿ ಬಂಗಾರ ತೆಗೆಯುತ್ತೇನೆ ಅನ್ನುವ ಹಾಪ್ ಮ್ಯಾಡ್ ರಾಹುಲ್ ಗಾಂಧಿ ಮಾತು ಕೇಳುತ್ತೀರಾ” ಎಂದ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ವಕ್ಪ್ ಕಾಯಿದೆ ಎಷ್ಟು ಅಪಾಯಕಾರಿ ಇದೆ ನೋಡಿ, ಅವರು ಮೂವತ್ತು ಪರ್ಸೆಂಟ್ ಜನಸಂಖ್ಯೆ ಆದರೆ, ನಮ್ಮವರು ಯಾರೂ ಶಾಸಕರಾಗಲು ಸಾಧ್ಯವಿಲ್ಲ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಹೊಲಿಕೆ ಮಾಡಿ ನೋಡಿ, ಅವರ ಅಭ್ಯರ್ಥಿ ಬಗ್ಗೆ ಅಜ್ಜಂಪೀರ್ ಖಾದ್ರಿನೇ ಅವನ ಬಣ್ಣ ಬಿಚ್ಚಿದ್ದಾನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಕೆಶಿ ನಮ್ಮ ಮುಖಾ ನೋಡಿ ಮತ ಹಾಕಿ ಎನ್ನುತ್ತಾರೆ. ನಾವು ಯಾರ ಮುಖ ನೋಡಿ ಹಾಕಬೇಕು. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪಿಎ ಮೂಲಕ ಸರ್ಕಾರಿ ಅಧಿಕಾರಿನ ಕೊಂದಿದ್ದಾರೆ. ಸಚಿವ ತಿಮ್ಮಾಪುರ 900 ಕೋಟಿ ಲೂಟಿ ಮಾಡಿದ್ದಾರೆ. ನೀವು ಹಿಂಗೆ ಇದ್ದರೆ ಎಲ್ಲ ಆಸ್ತಿ ಹೋಗುತ್ತದೆ. ಎರಡು ಸಾವಿರ ರೂಪಾಯಿ ಮಾತ್ರ ಉಳಿಯುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಕ್ಫ್‌ ವಿವಾದದಲ್ಲಿ ಜೆಪಿಸಿ | ಹಿಂದು ವಿರೋಧಿ, ರೈತ ವಿರೋಧಿ ನೀತಿಗೇಕೆ ಬಿಜೆಪಿ ಅಂಟಿಕೊಳ್ಳುತ್ತಿದೆ?

“ಇಡೀ ಭಾರತವನ್ನು ಕಾಂಗ್ರೆಸ್ ನಾಯಕರು ವಕ್ಪ್ ಮಾಡಲು ಹೊರಟಿದ್ದಾರೆ‌. ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಮರ್ಯಾದೆ ಇದ್ದೀದ್ದೇ ಆಗಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ಇವರೊಬ್ಬ ಭಂಡ ಸಿಎಂ” ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

“ಸಿದ್ದರಾಮಯ್ಯ ಅವರ ಸರ್ಕಾರ ಬಂದು ಒಂದೂವರೆ ವರ್ಷ ಆಯಿತು ಒಂದು ಪೈಸೆ ಕೊಟ್ಟಿಲ್ಲ‌‌. ನಮಗೆ ಕ್ಷೇತ್ರದ ಅಭಿವೃದ್ದಿಗೆ ಹಣ ಕೇಳಿದರೆ, ಗ್ಯಾರಂಟಿ ಹಣ ಕೊಟ್ಟಿದ್ದೇವೆ ಎಂದು ಉಡಾಫೆಯಾಗಿ ಹೇಳುವ ಬೇಜವಾಬ್ದಾರಿ ಸರ್ಕಾರ ಹಿಂದೆಂದೂ ಕಂಡಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...