ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

Date:

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

- Advertisement -

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಶ್ರೀನಿವಾಸ್ ಶಾಶ್ವತ ಶಾಸಕ

“ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ” ಎಂದು ಕರೆ ನೀಡಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ” ಎಂದು ಕಿಡಿಕಾರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ ಹೆಚ್ ಮುನಿಯಪ್ಪ, ಜಮೀರ್ ಅಹಮದ್ ಖಾನ್, ಎನ್ ಎಸ್ ಬೋಸರಾಜ್, ಶಾಸಕ ಶರತ್ ಬಚ್ಚೇಗೌಡ , ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...