ನಮಗೆ ಮತ ಹಾಕಿದರೆ ಬಿಹಾರದಲ್ಲಿ ಮದ್ಯ ಮಾರಾಟ ನಿಷೇಧ ರದ್ದು: ಜನ ಸುರಾಜ್ ಪಕ್ಷ

Date:

ಈ ಹಿಂದಿನ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಅಧಿಕಾರಕ್ಕೆ ಬಂದರೆ ಸದ್ಯ ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ವಿಧಿಸಿರುವ ಮದ್ಯ ಮಾರಾಟ ಮತ್ತು ಸೇವನೆ ಮೇಲೆ ನಿಷೇಧವನ್ನು ರದ್ದುಗೊಳಿಸಲಾಗುವುದು ಎಂದು ಜನ ಸುರಾಜ್ ಪಕ್ಷ ಭಾನುವಾರ ಪುನರುಚ್ಚರಿಸಿದೆ.

- Advertisement -

ಎಲ್‌ಜೆವಿ (ಆರ್‌ವಿ) ನಾಯಕ ಕುಮಾರ್ ಸೌರವ್ ಅವರನ್ನು ಜನ ಸುರಾಜ್ ಪಕ್ಷಕ್ಕೆ ಸ್ವಾಗತಿಸುತ್ತಾ ಮಾಧ್ಯಮದೊಂದಿಗೆ ಮಾತನಾಡಿದ ಜನ ಸುರಾಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್, “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಜನ ಸುರಾಜ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದ್ಯ ನಿಷೇಧವನ್ನು ಕೂಡಲೇ ತೆಗೆದುಹಾಕಲಾಗುವುದು ಎಂದು ನಾವು ಹೇಳುತ್ತಲೇ ಇದ್ದೇವೆ. ಇದರಿಂದಾಗಿ ರಾಜ್ಯವು ಸುಮಾರು 28,000 ಕೋಟಿ ರೂ.ಗಳ ಆದಾಯ ನಷ್ಟವನ್ನು ಉಳಿಸಲು ಸಾಧ್ಯವಾಗುತ್ತದೆ. ಈ ಹಣವನ್ನು ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ(ಐಎಂಎಫ್‌) 5ರಿಂದ 6 ಲಕ್ಷ ಕೋಟಿ ರೂ.ಗಳ ಸಾಲವನ್ನು ಸಂಗ್ರಹಿಸಲು ಬಳಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

“ಸೌರವ್ ಹಣಕಾಸು ಮತ್ತು ಕಾನೂನಿನಲ್ಲಿ ಪರಿಣತಿ ಹೊಂದಿದ್ದಾರೆ. ಅವರು ಭಾರತದ ಖಾಸಗಿ ಬ್ಯಾಂಕಿನಲ್ಲಿ ಸೆಕ್ಯುರಿಟೈಸೇಶನ್ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಬಿಹಾರದಲ್ಲಿ ಮದ್ಯ ನಿಷೇಧವನ್ನು ತೆಗೆದುಹಾಕಿದ ನಂತರ ಉಳಿತಾಯವಾಗುವ ಹಣದ ಮೂಲಕ ಸಾಲ ಸಂಗ್ರಹಿಸಲು ನಾವು ಉದಯ್ ಅವರ ಪರಿಣತಿಯನ್ನು ಬಳಸುತ್ತೇವೆ” ಎಂದು ಸಿಂಗ್ ಹೇಳಿದರು.

2016ರ ಏಪ್ರಿಲ್‌ನಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ಆದರೆ ತಮ್ಮ ಜನ ಸುರಾಜ್ ಪಕ್ಷ ಬಿಹಾರದಲ್ಲಿ ಸರ್ಕಾರವನ್ನು ರಚಿಸಿದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ರದ್ದುಗೊಳಿಸಲಾಗುವುದು ಎಂದು ಈ ಹಿಂದೆಯೇ ಪ್ರಶಾಂತ್ ಕಿಶೋರ್ ಅವರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...