“ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ ಬಳಿಕ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇಂಡಿಯಾ ಮೈತ್ರಿಕೂಟದ ಸಂಚಾಲಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, “ನಮ್ಮ ಮೈತ್ರಿಕೂಟಕ್ಕೆ ಸಿಕ್ಕಿರುವ ಅಗಾಧ ಬೆಂಬಲಕ್ಕಾಗಿ ಭಾರತದ ಜನತೆಗೆ ಇಂಡಿಯಾ ಒಕ್ಕೂಟದಲ್ಲಿರುವ ಪಕ್ಷಗಳ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಬಿಜೆಪಿ ಮತ್ತು ಅವರ ದ್ವೇಷ, ಭ್ರಷ್ಟಾಚಾರದ ರಾಜಕಾರಣಕ್ಕೆ ಈ ಬಾರಿಯ ಜನಾದೇಶವು ತಕ್ಕ ಉತ್ತರವನ್ನು ನೀಡಿದೆ” ಎಂದು ತಿಳಿಸಿದ್ದಾರೆ.
The constituents of the INDIA Bloc thank the people of India for the overwhelming support received by our alliance. The people’s mandate has given a befitting reply to the BJP and their politics of hate, corruption and deprivation. This is a political and moral defeat of Prime… pic.twitter.com/oWyQSrxWBR
— Mallikarjun Kharge (@kharge) June 5, 2024
“ಈ ಬಾರಿಯ ಫಲಿತಾಂಶವು ಭಾರತದ ಸಂವಿಧಾನದ ರಕ್ಷಣೆ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಂಡವಾಳಶಾಹಿಗಳ ವಿರುದ್ಧದ ತೀರ್ಪಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಇಂಡಿಯಾ ಒಕ್ಕೂಟವು ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಹೋರಾಡುವುದನ್ನು ಮುಂದುವರಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.
“ಬಿಜೆಪಿ ನೇತೃತ್ವದ ಸರ್ಕಾರವು ಆಡಳಿತ ನಡೆಸಕೂಡದು ಎಂಬುದು ಜನರ ಆಶಯ. ಈ ಆಶಯವನ್ನು ಈಡೇರಿಸಲು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ನಿರ್ಧಾರವಾಗಿದ್ದು, ಆ ಮೂಲಕ ನಾವು ಜನರಿಗೆ ನೀಡಿದ ಭರವಸೆಗಳನ್ನು ನಾವು ಈಡೇರಿಸುತ್ತೇವೆ” ಎಂದು ಇಂಡಿಯಾ ಮೈತ್ರಿಕೂಟದ ಸಂಚಾಲಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
कांग्रेस अध्यक्ष श्री @kharge के आवास पर INDIA गठबंधन के नेताओं ने बैठक कर लोकसभा चुनाव के परिणाम और आगामी रणनीति पर चर्चा की। pic.twitter.com/7MxqASQzfl
— Congress (@INCIndia) June 5, 2024
ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಿವಸೇನೆಯ ಸಂಜಯ್ ರಾವತ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್ಜೆಡಿಯ ತೇಜಸ್ವಿ ಯಾದವ್, ಎನ್ಸಿಪಿ(ಎಸ್ಸಿಪಿ) ಅಧ್ಯಕ್ಷ ಶರದ್ ಪವಾರ್, ಸಿಪಿಎಂನ ಸೀತಾರಾಂ ಯೆಚೂರಿ, ಕಲ್ಪನಾ ಸೊರೇನ್, ಜಾರ್ಖಂಡ್ ಸಿಎಂ ಚಂಪೈ ಸೊರೇನ್, ಡಿ ರಾಜಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
