ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಶೀಘ್ರದಲ್ಲಿ ಹಿಂಪಡೆಯುತ್ತೇವೆ: ಸಚಿವ ದರ್ಶನಾಪುರ

Date:

Advertisements

ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.

ವಿಧಾನ ಪರಿಷತ್ ಮಂಗಳವಾರ ಸದಸ್ಯ ಎಸ್. ಮುನಿರಾಜು ಗೌಡ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆ 25ಕ್ಕೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರ ಪರವಾಗಿ ಅವರು ಉತ್ತರಿಸಿದರು.

‘ಬಿಎಂಐಸಿಪಿ ಯೋಜನೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನುಗಳ ಪೈಕಿ 554 ಎಕರೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತಂತೆ , ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ಗುರುತಿಸಿ ಸರ್ವೆ ನಂಬರ್‌ಗಳೊಂದಿಗೆ ವಿವರವಾದ ಮಾಹಿತಿ ಸಲ್ಲಿಸುವಂತೆ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ(ದಕ್ಷಿಣ) ಇವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಸ್ಪಷ್ಟವಾದ ವರದಿ ಪಡೆದು ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಲಾಗುವುದು ಹಾಗೂ ಸದ್ರಿ ಭೂಮಿಯನ್ನು ಹಿಂಪಡೆದ ನಂತರ ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದರು.

Advertisements

ಯಶಸ್ವಿನಿ ಯೋಜನೆಯ ಮಾನದಂಡಗಳ ಬದಲಾವಣೆಗೆ ಪರಿಶೀಲನೆ: ಸಚಿವ ಕೆ.ಎನ್.ರಾಜಣ್ಣ
ಯಶಸ್ವಿನಿ ಯೋಜನೆ ಅನುಷ್ಠಾನದ ಉದ್ದೇಶದಿಂದ ಅವಶ್ಯಕತೆ ಕಂಡು ಬಂದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಬದಲಾಯಿಸಲು ಪರಿಶೀಲಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದರು.

ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಿಸಲಾಗಿದೆ. ಅದರಂತೆ ಸದಸ್ಯರ ನೋಂದಣಿಯನ್ನು 2022ರ ನವೆಂಬರ್ 1ರಿಂದ ಪ್ರಾರಂಭಿಸಿದ್ದು ನೋಂದಾಯಿಸಿದ ಸದಸ್ಯರಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ 2023ರ ಜನವರಿ 1 ರಿಂದ 2024ರ ಮಾರ್ಚ 31ರವರೆಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ಈಗಿನ ಪರಿಷ್ಕೃತ ಯಶಸ್ವಿನಿ ಯೋಜನೆಯಡಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ನೆಟ್‌ವರ್ಕ್ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ನಿಗದಿತವಾಗಿ ಪಾವತಿಸುತ್ತ ಬಂದಿದ್ದು ಜನವರಿ 2023ರಿಂದ ಆಗಸ್ಟ್ 2023ರವರೆಗೆ 8 ಕಂತುಗಳಲ್ಲಿ 39 ಕೋಟಿ ರೂ ಮೊತ್ತವನ್ನು ಪಾವತಿಸಲಾಗಿದೆ’ ಎಂದು ಸಚಿವರು ಇದೆ ವೇಳೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X