ಬಿಹಾರ ಚುನಾವಣೆ | ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ: ತೇಜಸ್ವಿ ಯಾದವ್

Date:

ಬಿಹಾರ ಚುನಾವಣೆ ಬಳಿಕ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಭಾನುವಾರ ಭರವಸೆಯನ್ನು ಪುನರುಚ್ಚರಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಾದ ಕತಿಹಾರ್ ಮತ್ತು ಕಿಶನ್‌ಗಂಜ್‌ನಲ್ಲಿ ಬೃಹತ್ ರ‍್ಯಾಲಿ ಉದ್ದೇಶಿಸಿ ತೇಜಸ್ವಿ ಯಾದವ್ ಈ ಹೇಳಿಕೆ ನೀಡಿದ್ದಾರೆ.

- Advertisement -

ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ದಾಖಲೆಯನ್ನು ಉಲ್ಲೇಖಿಸಿದ ತೇಜಸ್ವಿ, “ಹಿಂದಿನ ಲಾಲು-ರಾಬ್ರಿ ಆಡಳಿತಗಳು ಆರ್‌ಎಸ್‌ಎಸ್ ಮತ್ತು ಕೋಮು ಶಕ್ತಿಗಳ ವಿರುದ್ಧ ದೃಢವಾಗಿ ನಿಂತಿದ್ದವು. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂತಹ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಮತ್ತು ದೇಶಾದ್ಯಂತ ಕೋಮು ದ್ವೇಷವನ್ನು ಹರಡಿದ ಬಿಜೆಪಿ ‘ಭಾರತ್ ಜಲೋ ಪಾರ್ಟಿ’ ಆಗಿದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? 9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಹಾಗೆಯೇ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಕೋಮು ಸಾಮರಸ್ಯದ ವಿಶಾಲ ರಕ್ಷಣೆಯ ಭಾಗವಾಗಿ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆಯನ್ನು ತೇಜಸ್ವಿ ನೀಡಿದರು. “ನಮ್ಮ ಒಕ್ಕೂಟವು ಸರ್ಕಾರ ರಚಿಸಿದರೆ ಸೀಮಾಂಚಲ್ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು. ವಿಶ್ವ ದರ್ಜೆಯ ವಿಶ್ವವಿದ್ಯಾಲಯ, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಾಪಿಸಲಾಗುವುದು” ಎಂದೂ ಈ ಭರವಸೆ ನೀಡಿದರು.

ಹಲವು ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳ ಬಿಸಿ ಚರ್ಚೆ ಮತ್ತು ಆಕ್ಷೇಪಣೆಗಳ ನಡುವೆಯೇ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು 2025ರ ಏಪ್ರಿಲ್ ತಿಂಗಳಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಆದರೆ ಈ ಈ ಕಾಯ್ದೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಾಂಸ್ಕೃತಿಕ ಹಕ್ಕುಗಳಿಗೆ ಧಕ್ಕೆ ತರುತ್ತದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...