ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ ಭರವಸೆ

Date:

Advertisements
  • ಗಾಣಿಗರ ಸಂಘದ ಸುವರ್ಣ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ
  • ಪ್ರಧಾನಿ ಮೋದಿ ಅವರಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಗೊತ್ತಿಲ್ಲವೋ?

ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅಖಿಲ ಕರ್ನಾಟಕ ಗಾಣಿಗರ ಸಂಘ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಅಲಹಳ್ಳಿ ಅಂಜನಾಪುರದಲ್ಲಿ ಶನಿವಾರ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶ, ನೂತನ ಕಟ್ಟಡ ಬ್ಲಾಕ್-1 ಉದ್ಘಾಟನೆ ಹಾಗೂ ಬ್ಲಾಕ್ -2 ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

“ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ನಿಮ್ಮೊಂದಿಗೂ ಇರುತ್ತೇವೆ” ಎಂದರು.

Advertisements

“ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಇದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ” ಎಂದು ಹೇಳಿದರು.

“ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ, ಗೊತ್ತಿಲ್ಲ. ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ” ಎಂದು ತಿಳಿಸಿದರು.

“ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ ನಾವು ಸ್ವೀಕಾರ ಮಾಡಿಲ್ಲ. ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ಮುಂದುವರೆಸಲಾಗಿದೆ. ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

ನೆರವಿನ ಭರವಸೆ

ಗಾಣಿಗರಿಗೆ ಹೆಚ್ಚಿನ ಸಹಾಯ ಮಾಡುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು, ”ನಿಮಗೆ ನ್ಯಾಯ ಕೊಡಿಸಲು ಸದಾ ನಿಮ್ಮೊಂದಿಗೆ ಇರುತ್ತೇನೆ. ಎಲ್ಲಾ ಜಾತಿಯ ಬಡವರಿಗೆ ಗ್ಯಾರಂಟಿಗಳನ್ನು ಒದಗಿಸಲಾಗಿದೆ.
ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ, ರಾಧಾಕೃಷ್ಣ ಎಂಬುವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಾಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಮುಂದೆಯೂ ಅದನ್ನು ನಾವು ಮುಂದುವರೆಸುತ್ತೇವೆ” ಎಂದು ಹೇಳಿದರು.

“ವಿ.ಆರ್.ಸುದರ್ಶನ್ ಮತ್ತು ನಾವು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ ಎಂದರು. ರೂಢಾನಂದಪುರಿ ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಿಗೆ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಲಿ” ಎಂದು ಹಾರೈಸಿದರು.

ಗಾಣಿಗ ಸಂಘದ ಅಧ್ಯಕ್ಷ ಎಂ.ಆರ್.ರಾಜಶೇಖರ್, ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್.ಸುದರ್ಶನ್, ಶಾರದಾ ಮೋಹನ್ ಶೆಟ್ಟಿ, ಡಾ. ವಾಸಂತಿ, ಮೈಸೂರಿನ ಮಾಜಿ ಮೇಯರ್ ಅನಂತ್, ರಮೇಶ್, ಎಂ.ಎಸ್.ಶ್ರೀನಿವಾಸಮೂರ್ತಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X