ಸಚಿವ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗುತ್ತಾ: ಆರ್‌ ಅಶೋಕ್‌ ಪ್ರಶ್ನೆ

Date:

ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿರುವ ಅವರು, “ಸಿಎಂ ಸಿದ್ದರಾಮಯ್ಯನವರೇ, ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ? ನಿಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಆರ್‌ ಅಶೋಕ್‌ ಪ್ರಶ್ನೆಗಳು

  • ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರಲ್ಲ, ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ? ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು?
  • ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು? ರಾಹುಲ್‌ ಗಾಂಧಿ ಅವರು ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನ ಜೀನ್ಸ್ ರಾಜಧಾನಿ ಮಾಡುವ ಭರವಸೆ ಏನಾಯ್ತು?
  • ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರಲ್ಲಾ? ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ?
  • ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಿದ್ದರಲ್ಲ, ಕನಿಷ್ಠ ಪಕ್ಷ ಒಂದಾದರೂ ಸ್ಥಾಪನೆ ಆಗಿದೆಯಾ?
  • ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗು ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ? ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ?
  • ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ?

“ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೇ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ “ಗುಳೇ” ಹೋಯಿತೋ? ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ...

ಮಾಮಾ Vs ಚಾಚಾ: ಬಿಜೆಪಿ ಬಿರುಕನ್ನು ಬಯಲು ಮಾಡಿದ ಮಧ್ಯಪ್ರದೇಶ ಆದಿವಾಸಿ ಪ್ರತಿಭಟನೆ

ಈ ವಿವಾದವು ಕೇವಲ ಒಂದು ಅರಣ್ಯ ಭೂಮಿ ತೆರವು ಪ್ರಕರಣವಾಗಿ ಉಳಿದಿಲ್ಲ....