ಕೊಡಗು | ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಆಧ್ಯತೆ: ಸಚಿವ ಚಲುವರಾಯಸ್ವಾಮಿ

Date:

Advertisements

ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕೂರ್ಗ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುತ್ತಿರುವ ಮೂರು ದಿನಗಳ ‘ಕೃಷಿ ಯಂತ್ರ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ರಾಜ್ಯ ಸರ್ಕಾರವು ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ತೆರದಿದೆ. ಮುಂದಿನ‌ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣಕ್ಕೆ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತದೆ” ಎಂದು ಹೇಳಿದರು.

“ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ರೂ. ಮೀಸಲಿರಿಸಲಾಗಿದೆ. 70:30ರ ಸಹಾಯಧನ- ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸಬಹುದಾಗಿದೆ” ಎಂದು ಸಚಿವರು ಹೇಳಿದರು.

Advertisements

“ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು, ಕಾವೇರಿ ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ” ಎಂದು ಅವರು ಹೇಳಿದರು.

“ನಮ್ಮ ಸರ್ಕಾರ ಅಧಿಕಾರಿಕ್ಕೆ ಬಂದು‌ ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನ‌ಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ರೈತರಿಗೆ 5 ಲಕ್ಷ ರೂ.ಗಳವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೂ ಆರ್ಥಿಕ ‌ನೆರವು ಒದಗಿಸುತ್ತಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X