ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

Date:

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು ಮತ್ತೆ ಆರೋಪಿಸಿರುವ ಲೋಕಸಭೆ ವಿರೋಧ ಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ, “ಮಹಾಘಟಬಂಧನವು(ಮಿತ್ರಕೂಟ) ಬಿಹಾರದಲ್ಲಿ ಒಂದೇ ಒಂದು ಮತವನ್ನು ಸಹ ಕದಿಯಲು ಬಿಡುವುದಿಲ್ಲ” ಎಂದು ಪ್ರತಿಪಾದಿಸಿದರು.

- Advertisement -

ಬಿಹಾರದಲ್ಲಿ ಮತದಾರರ ಅಧಿಕಾರ ಯಾತ್ರೆಯ ಮೂರನೇ ದಿನದಂದು ಭಗತ್ ಸಿಂಗ್ ಚೌಕ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಂವಿಧಾನವು ಜನರಿಗೆ ಮತದಾನದ ಹಕ್ಕನ್ನು ನೀಡಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಚುನಾವಣಾ ಆಯುಕ್ತರು ಈ ಹಕ್ಕನ್ನು ಜನರಿಂದ ಕಿತ್ತುಕೊಳ್ಳುತ್ತಿದ್ದಾರೆ. ಆದರೆ ತೇಜಸ್ವಿ ಯಾದವ್, ನಾನು, ಇತರೆ ನಾಯಕರು ಒಂದೇ ಒಂದು ಮತವನ್ನು ಕದಿಯಲು ಬಿಡುವುದಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಬಿಹಾರದಲ್ಲಿ ಅದೇ ರೀತಿ ಆಗಲು ಬಿಡಲ್ಲ: ರಾಹುಲ್ ಗಾಂಧಿ

ಹರಿಯಾಣ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜೊತೆಯಾಗಿ ಚುನಾವಣೆಗಳನ್ನು ಕದ್ದಿದೆ. ಮಹಾರಾಷ್ಟ್ರದಲ್ಲಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಸುಮಾರು 1 ಕೋಟಿ ಮತದಾರರನ್ನು ನಿಗೂಢವಾಗಿ ಸೇರಿಸಲಾಗಿದೆ. ಮತದಾರರ ಪಟ್ಟಿ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಕೇಳಿದೆ. ಆದರೆ ಚುನಾವಣಾ ಸಂಸ್ಥೆ ನಿರಾಕರಿಸಿದೆ ಎಂದು ರಾಹುಲ್ ಪುನರುಚ್ಛರಿಸಿದರು.

“ಈಗ ಬಿಹಾರದಲ್ಲಿ ಹೊಸ ರೀತಿಯಲ್ಲಿ ಮತ ಕಳವು ನಡೆಯುತ್ತಿದೆ. ನಿಮ್ಮ ಕಣ್ಣೆದುರೇ ಈ ಕಳ್ಳತನ ಮಾಡುತ್ತಿದ್ದಾರೆ. ಆದರೆ ನಾವು ಅವರು ಮತಗಳನ್ನು ಕದಿಯಲು ಬಿಡುವುದಿಲ್ಲ. ಮೊದಲು ನಿಮ್ಮ ಮತದಾರರ ಚೀಟಿ ಹೋಗುತ್ತದೆ. ನಂತರ ನಿಮ್ಮ ಪಡಿತರ ಚೀಟಿ ಹೋಗುತ್ತದೆ. ಅಂತಿಮವಾಗಿ ನಿಮ್ಮ ಭೂಮಿಯನ್ನು ಅದಾನಿ ಮತ್ತು ಅಂಬಾನಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಜನರಿಗೆ ಎಚ್ಚರಿಕೆ ನೀಡಿದರು.

ಮಂಗಳವಾರ ಯಾತ್ರೆಯು ಗಯಾದ ವಜೀರ್‌ಗಂಜ್‌ನಿಂದ ಪ್ರಾರಂಭವಾಗಿದ್ದು, ನವಡಾವನ್ನು ಪ್ರವೇಶಿಸಿದೆ. ಈ ಯಾತ್ರೆಯು ಸೆಪ್ಟೆಂಬರ್ 1ರಂದು ಪಟನಾದಲ್ಲಿ ಕೊನೆಯಾಗಲಿದೆ. ಈ ಯಾತ್ರೆಯು ನಳಂದ, ಶೇಖ್‌ಪುರ, ಲಖಿಸರಾಯ್, ಮುಂಗೇರ್, ಭಾಗಲ್ಪುರ, ಕಟಿಹಾರ್, ಪೂರ್ಣಿಯಾ, ಅರಾರಿಯಾ ಮತ್ತು ಸುಪೌಲ್ ಮೂಲಕವೂ ಹಾದು ಹೋಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....