SIR | ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಭಾರತ ಚುನಾವಣಾ ಆಯೋಗ (ಇಸಿಐ) ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಮಮತಾ ನೇತೃತ್ವದ 15 ಸದಸ್ಯರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ಸೋಮವಾರ ದೆಹಲಿಯ ನಿರ್ವಚನ ಸದನದಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡಲಿದೆ. ಇದಕ್ಕೂ ಮುನ್ನವೇ ಬ್ಯಾನರ್ಜಿ ಸುಪ್ರೀಂ ಕದ ತಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಇದನ್ನು ಓದಿದ್ದೀರಾ? ಇಡಿ vs ಮಮತಾ | ಟಿಎಂಸಿ ಕಾರ್ಯತಂತ್ರ ಕದಿಯಲು ಬಿಜೆಪಿಯಿಂದ ತನಿಖಾ ಸಂಸ್ಥೆಯ ದುರುಪಯೋಗ?

ಫೆಬ್ರವರಿ ಅಂತ್ಯದ ವೇಳೆಗೆ ಚುನಾವಣಾ ಸಂಸ್ಥೆಯು ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸುವ ನಿರೀಕ್ಷೆಯಿದೆ. ಅದರ ನಡುವೆಯೇ ತರಾತುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವುದರ ವಿರುದ್ಧ ಈಗಾಗಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕಾನೂನು ಹೋರಾಟವು ಶುರುವಾಗಿದೆ.

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ವಿಧಾನದ ವಿರುದ್ಧ ಶನಿವಾರ ಮಮತಾ ಚುನಾವಣಾ ಆಯೋಗಕ್ಕೆ ಆರನೇ ಬಾರಿಗೆ ಪತ್ರವನ್ನು ಬರೆದಿದ್ದಾರೆ. “ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕುವ ಸಾಧ್ಯತೆಯ ಬಗ್ಗೆ ಭೀತಿ ಮತ್ತು ಆತಂಕವಿದೆ. ಬಿಎಲ್‌ಒಗಳು ಭಾರೀ ಕೆಲಸದ ಹೊರೆ ಎದುರಿಸುತ್ತಿದ್ದಾರೆ. ಈ ಪ್ರಕ್ರಿಯೆಯು ನಾಗರಿಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಸೇರಿದಂತೆ 140 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

ಮಮತಾ ಸಲ್ಲಿಸಿದ ಅರ್ಜಿಯನ್ನು ಈ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇನ್ನು ಎಸ್‌ಐಆರ್ ವಿರುದ್ಧ ಈ ಹಿಂದೆ ಟಿಎಂಸಿ ಸಂಸದರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ. ಈ ಹಿಂದೆ ಜನವರಿ 12ರಂದು ಮಮತಾ ಸಿಇಸಿಗೆ ತಮ್ಮ ಐದನೇ ಪತ್ರವನ್ನು ಬರೆದಿದ್ದು, ಅದಕ್ಕೂ ಮುನ್ನ ಜನವರಿ 3ರಂದು ಸಿಎಂ ಸಿಇಸಿಗೆ ಪತ್ರ ಬರೆದು, “ಎಸ್ಐಆರ್ ತಕ್ಷಣವೇ ನಿಲ್ಲಿಸಬೇಕು” ಎಂದು ಒತ್ತಾಯಿಸಿದ್ದರು.

ಆಯೋಗದ ಉದ್ದೇಶ ತಿದ್ದುಪಡಿ ಅಥವಾ ಮತದಾರರ ಪಟ್ಟಿಗೆ ಸೇರ್ಪಡೆಯಲ್ಲ. ಬದಲಿಗೆ ಮತದಾರರನ್ನು ತಮ್ಮ ಹಕ್ಕಿನಿಂದ ದೂರು ಇಡುವುದು ಎಂದು ಆರೋಪಿಸಿದ್ದರು. ಹಾಗೆಯೇ ವಿಚಾರಣಾ ಕೇಂದ್ರಗಳಿಗೆ ಹಾಜರಾಗಲು ಆಯೋಗದಿಂದ ನೋಟಿಸ್‌ಗಳನ್ನು ಪಡೆಯುತ್ತಿರುವ ಜನರಿಗೆ ಕಿರುಕುಳ ನಿಲ್ಲಿಸುವಂತೆ ಒತ್ತಾಯಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...