ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕ

Date:

ಭಾರತ ಚುನಾವಣಾ ಆಯೋಗ (ಇಸಿಐ) ನಡೆಸುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಪಶ್ಚಿಮ ಬಂಗಾಳ ಘಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಿಹಾರ ಎಸ್‌ಐಆರ್ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದ ಮುಂದೆ ಅರ್ಜಿ ಸಲ್ಲಿಸಲಾಗಿದೆ.

- Advertisement -

ಮಂಗಳವಾರ ನಡೆಯಲಿರುವ ಬಿಹಾರ ಎಸ್‌ಐಆರ್ ಪ್ರಕರಣದ ವಿಚಾರಣೆಯ ಜತೆಗೆ ಈ ಅರ್ಜಿಯ ವಿಚಾರಣೆಯನ್ನೂ ನಡೆಸುವಂತೆ ಅರ್ಜಿದಾರರು ಕೋರಿದ್ದಾರೆ. ಹಾಗೆಯೇ “ಈ ಪ್ರಕ್ರಿಯೆಯಲ್ಲಿರುವ ಲೋಪಗಳ ಬಗ್ಗೆ ಜನರು ಕಾಂಗ್ರೆಸ್ ಅನ್ನು ಸಂಪರ್ಕಿಸುತ್ತಿದ್ದಾರೆ. ಇದರಿಂದಾಗಿ ಪಕ್ಷ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? 12 ರಾಜ್ಯಗಳಲ್ಲಿ ನಾಳೆಯಿಂದ ಎಸ್‌ಐಆರ್ ಎರಡನೇ ಹಂತ ಆರಂಭ

“ಪಶ್ಚಿಮ ಬಂಗಾಳದ ಅರ್ಜಿಯೂ ನಮ್ಮ ಪೀಠದ ಮುಂದೆಯೇ ಬರುತ್ತದೆಯೇ ಎಂಬುದು ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಗಳಿಗೆ ಬಿಟ್ಟದ್ದು” ಎಂದು ಹೇಳಿದೆ. ಈ ವೇಳೆ, “ಎಸ್‌ಐಆರ್‌ಗೆ ಸಂಬಂಧಿಸಿದ ಇತರ ಅರ್ಜಿಗಳೂ ಬಿಹಾರ ಎಸ್‌ಐಆರ್ ಅರ್ಜಿಯೊಂದಿಗೆ ವಿಚಾರಣೆಗೆ ಒಳಪಡಲಿದೆ” ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ಅದಾದ ಬಳಿಕ ಪೀಠವು ಬಿಹಾರ ಎಸ್‌ಐಆರ್ ಅರ್ಜಿ ವಿಚಾರಣೆಯೊಂದಿಗೆ ಈ ಅರ್ಜಿಯ ವಿಚಾರಣೆಯನ್ನೂ ಮಂಗಳವಾರ ನಡೆಸಲು ಒಪ್ಪಿಕೊಂಡಿದೆ.

ಈ ಹಿಂದೆ 2025ರ ಜೂನ್‌ನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ನಿರ್ದೇಶಿಸಿದೆ. ಆ ಆದೇಶವನ್ನು ಪ್ರಶ್ನಿಸಿ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವುಮೆನ್ (ಎನ್‌ಎಫ್‌ಐಡಬ್ಲ್ಯೂ) ಸಲ್ಲಿಸಿದ ಅರ್ಜಿಗಳು ಸೇರಿದಂತೆ ಹಲವು ಅರ್ಜಿಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಸುಪ್ರೀಂ ಕೋರ್ಟ್ ಈ ಪ್ರಕ್ರಿಯೆಗೆ ಯಾವುದೇ ತಡೆಯಾಜ್ಞೆ ವಿಧಿಸದ ಕಾರಣ ಬಿಹಾರದಲ್ಲಿ ಎಸ್‌ಐಆರ್ ನಡೆದಿದ್ದು, ವಿಪಕ್ಷಗಳು ಹಲವು ದೋಷಗಳತ್ತ ಬೊಟ್ಟು ಮಾಡಿದೆ. ಬಡವರ್ಗದ ಮತದಾನದ ಹಕ್ಕು ಕಸಿಯಲಾಗಿದೆ ಎಂದು ದೂರಿದೆ.

ಅದಾದ ಬಳಿಕವೂ 2025ರ ಅಕ್ಟೋಬರ್‌ನಲ್ಲಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್‌ಐಆರ್ ಅನ್ನು ಚುನಾವಣಾ ಆಯೋಗ ವಿಸ್ತರಿಸಿದೆ. ಈ ಬೆನ್ನಲ್ಲೇ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನಲ್ಲಿ ಎಸ್‌ಐಆರ್ ಅನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಇದೀಗ ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕವೂ ಅರ್ಜಿ ಸಲ್ಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...