ಬಜೆಟ್‌ನಲ್ಲಿ ಬಂಗಾಳದ ಬಗ್ಗೆ ಪ್ರಸ್ತಾಪವಿಲ್ಲ, ಕೇಂದ್ರ ನಮ್ಮನ್ನು ‘ಬಾಂಗ್ಲಾದೇಶಿಗಳು’ ಎಂಬಂತೆ ನೋಡುತ್ತೆ: ಅಭಿಷೇಕ್ ಬ್ಯಾನರ್ಜಿ

Date:

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಟೀಕಿಸಿದ್ದಾರೆ. “ಬಜೆಟ್‌ನಲ್ಲಿ ಸರ್ಕಾರ ಪಶ್ಚಿಮ ಬಂಗಾಳದ ಪ್ರಸ್ತಾಪವನ್ನೇ ಮಾಡಿಲ್ಲ. ಸರ್ಕಾರ ಬಂಗಾಳದ ಜನರನ್ನು ‘ಬಾಂಗ್ಲಾದೇಶಿಗಳು’ ಎಂಬಂತೆ ನೋಡುತ್ತದೆ” ಎಂದು ಆರೋಪಿಸಿದ್ದಾರೆ.

- Advertisement -

ಮಾಧ್ಯಮಗಳು ಬಜೆಟ್ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಬ್ಯಾನರ್ಜಿ, “ಬಜೆಟ್‌ನಲ್ಲಿ ಯಾವುದೇ ಸಮುದಾಯಕ್ಕೆ ಬೇಕಾದ ಯೋಜನೆಗಳಿಲ್ಲ. ಆಧಾರರಹಿತ ಮತ್ತು ದೃಷ್ಟಿಹೀನ ಬಜೆಟ್ ಇದು” ಎಂದು ಕರೆದಿದ್ದಾರೆ. ಹಾಗೆಯೇ, “ಬಜೆಟ್ ಭಾಷಣ 85 ನಿಮಿಷಗಳಷ್ಟು ಉದ್ಧವಿದೆ. ಅಂದರೆ 5,100 ಸೆಕೆಂಡುಗಳು. ಆದರೆ ಬಂಗಾಳವನ್ನು ಮಾತ್ರ ಉಲ್ಲೇಖಿಸಿಲ್ಲ. ಕೇಂದ್ರ ಸರ್ಕಾರ ಮತ್ತು ಅದರ ಸಚಿವರು, ಬಜೆಟ್ ಮಂಡಿಸಿದವರು ನಮ್ಮನ್ನು ಬಾಂಗ್ಲಾದೇಶಿಗಳು ಎಂದು ಕರೆಯುತ್ತಾರೆ. ಬಂಗಾಳವನ್ನು ಬಿಡಿ, ರೈತರು, ಯುವಕರಿಗೂ ಈ ಬಜೆಟ್‌ನಲ್ಲಿ ಏನೂ ಇಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ 2026 | ಯಾವುದು ಅಗ್ಗ, ಯಾವುದು ದುಬಾರಿ?

“ಅವರು (ನಿರ್ಮಲಾ ಸೀತಾರಾಮನ್) ಎಐ, ಕೌಶಲ್ಯ ಭಾರತ, ತಾಂತ್ರಿಕ ಪ್ರಗತಿಯ ಬಗ್ಗೆ ಮಾತನಾಡಿದ್ದಾರೆ. ಆದರೆ ಯುವಕರಿಗೆ ಉದ್ಯೋಗ ಹೇಗೆ ಸಿಗುತ್ತದೆ, ಉದ್ಯೋಗ ಹೇಗೆ ಉತ್ಪತ್ತಿಯಾಗುತ್ತದೆ ಎಂಬ ಬಗ್ಗೆ ಮಾತನಾಡಿಲ್ಲ. ರೈತರ ಆದಾಯವನ್ನು ಹೇಗೆ ಹೆಚ್ಚಿಸುವುದು ಎಂಬುದರ ಕುರಿತು ಏನೂ ಇಲ್ಲ” ಎಂದೂ ಹೇಳಿದ್ದಾರೆ.

“ಈಗಾಗಲೇ ಜಲ ಜೀವನ್ ಮಿಷನ್ ಹಣವನ್ನು ನಿಲ್ಲಿಸಲಾಗಿದೆ. ಈ ಹಿಂದಿನ ಭರವಸೆಗಳನ್ನು ಸಹ ಈಡೇರಿಸಿಲ್ಲ. 2021ರ ನಂತರ, ಬಿಜೆಪಿ ಬಂಗಾಳದ ಜನರನ್ನು ಹಿಂಸಿಸಿದ ರೀತಿ ನೋಡಿದಾಗ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರದಿಂದ ನಮಗೆ ಯಾವುದೇ ನಿರೀಕ್ಷೆಗಳಿಲ್ಲ. ಈಗಾಗಲೇ ಬಂಗಾಳದಲ್ಲಿ ತಮಗೆ ರಾಜಕೀಯ ಲಾಭವಿಲ್ಲ ಎಂದು ತಿಳಿದಿದ್ದಾರೆ. ಆದ್ದರಿಂದ ಉದ್ದೇಶಪೂರ್ವಕವಾಗಿ ರಾಜ್ಯಕ್ಕೆ ಹಣವನ್ನು ಹಂಚಿಕೆ ಮಾಡಿಲ್ಲ” ಎಂದು ದೂರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಆದ್ದರಿಂದಾಗಿ ಬಂಗಾಳಕ್ಕೆ ಅಧಿಕ ಕೊಡುಗೆ ನೀಡುವ ನಿರೀಕ್ಷೆಯಿತ್ತು. ಆದರೆ ಕೇಂದ್ರ ಮಾತ್ರ ತಮಗೆ ಚುನಾವಣಾ ಲಾಭವಿಲ್ಲ ಎಂದು ಖಚಿತವಾದ ರಾಜ್ಯವನ್ನು ಕಡೆಗಣಿಸಿದಂತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಆರ್ಥಿಕತೆಗೆ ಸ್ಥಿರ ಸಿದ್ಧಾಂತ ನೀಡಿದ ಇಬ್ಬರು ಅಮೆರಿಕನ್‌ ಅರ್ಥಶಾಸ್ತ್ರಜ್ಞರಿಗೆ ‌’ನೊಬೆಲ್’ ಗೌರವ

ಮೂಲ ಆರ್ಥಿಕ ನೀತಿಗಳ ಆಧಾರದ ಮೇಲೆ ಜಾಗತಿಕ ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡುವಲ್ಲಿ...

ಸೆಪ್ಟೆಂಬರ್‌ನಲ್ಲಿ ಶೇ. 5.54ಕ್ಕೆ ಏರಿಕೆಯಾದ ಚಿಲ್ಲರೆ ಹಣದುಬ್ಬರ: ದುಬಾರಿಯಾದ ಆಹಾರ ಪದಾರ್ಥಗಳೇ ಕಾರಣ

ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್ ತಿಂಗಳಿನಲ್ಲಿ...

SIR ವಿರುದ್ಧ, ಸಿಇಸಿ ಗ್ಯಾನೇಶ್ ವಜಾ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ,...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...