ಪಶ್ಚಿಮ ಬಂಗಾಳ SIR | 44 ಕ್ಷೇತ್ರಗಳಲ್ಲಿ 2021ರ ಗೆಲುವಿನ ಅಂತರಕ್ಕಿಂತ ಡಿಲೀಟ್‌ ಮಾಡಿದ ಮತದಾರರ ಸಂಖ್ಯೆಯೇ ಹೆಚ್ಚು!

Date:

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯ “ವಿಶೇಷ ತೀವ್ರ ಪರಿಷ್ಕರಣೆ” (Special Intensive Revision – SIR) ಪ್ರಕ್ರಿಯೆ ದೊಡ್ಡ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಈ ಎಸ್‌ಐಆರ್‌ ಪ್ರಕ್ರಿಯೆಯಿಂದ ಹೊರ ಹಾಕಲ್ಪಟ್ಟ ಸುಮಾರು 91ಲಕ್ಷ ಮತದಾರರ ಸಂಖ್ಯೆ ಒಂದು ಆಘಾತಕಾರಿ ಸತ್ಯಾಂಶವನ್ನು ಬಯಲುಗೊಳಿಸಿದೆ. ಎಸ್ಐಆರ್‌ ಪ್ರಕ್ರಿಯೆಯಿಂದ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 44 ವಿಧಾನಸಭಾ ಕ್ಷೇತ್ರಗಳ ಮತಪಟ್ಟಿಯಲ್ಲಿ ಅಳಿಸಿ ಹಾಕಲಾದ ಮತದಾರರ ಸಂಖ್ಯೆ, 2021ರ ವಿಧಾನಸಭಾ ಚುನಾವಣೆಯಲ್ಲಿನ ಅಭ್ಯರ್ಥಿಗಳ ಗೆಲುವಿನ ಅಂತರಕ್ಕಿಂತ ಹೆಚ್ಚಿದೆ ಎನ್ನುವ ಆಘಾತಕಾರಿ ಅಂಶ ಈಗ ಬೆಳಕಿಗೆ ಬಂದಿದೆ. ಇದರ ಹಿಂದೆ ರಾಜಕೀಯ ಕುತಂತ್ರ ಇದೆಯೇ ಎನ್ನುವ ಪ್ರಶ್ನೆಯನ್ನೂ ಉದ್ಭವಿಸಿದೆ.

ಹೌದು, ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ 44 ಕ್ಷೇತ್ರಗಳಲ್ಲಿ ಈ ವ್ಯತ್ಯಾಸ ಸ್ಪಷ್ಟವಾಗಿ ಕಂಡುಬಂದಿದೆ. 44 ಕ್ಷೇತ್ರಗಳಲ್ಲಿ ಗೆಲುವಿನ ಅಂತರ ತುಂಬಾ ಕಡಿಮೆ ಇತ್ತು. ಕೆಲವೆಡೆ 500 ರಿಂದ 5,000 ಮತಗಳ ಅಂತರವಿದೆ ಎನ್ನುವುದು ಕೂಡ ಇಲ್ಲಿ ಉಲ್ಲೇಖನೀಯ. ವಿಳಾಸ ಬದಲಾವಣೆ ಅಥವಾ ಇತರ ಕಾರಣ ನೀಡಿ ಮತಪಟ್ಟಿಯಿಂದ ಅಳಿಸಿ ಹಾಕಿದ ಮತಗಳ ಸಂಖ್ಯೆ ಗೆಲುವಿನ ಅಂತರಕ್ಕಿಂತ ಶೇ.1.5 ರಿಂದ 3 ಪಟ್ಟು ಹೆಚ್ಚಿದೆ.

ಇದನ್ನೂ ಓದಿ : 2100 ಎಕರೆ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ; ದೇವನಹಳ್ಳಿ ಮಾದರಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತರು

- Advertisement -

ಯಾವಾಗ ಗೆಲುವಿನ ಅಂತರ (Victory Margin) ಅಳಿಸಿ ಹಾಕಲಾದ ಮತದಾರರ ಸಂಖ್ಯೆಗಿಂತ ಕಡಿಮೆಯಿರುತ್ತದೆಯೋ, ಆಗ ಚುನಾವಣಾ ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳು ಉದ್ಭವವಾಗುವುದು ಸಹಜ. ಉದಾಹರಣೆಗೆ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ 2,000 ಮತಗಳಿಂದ ಗೆದ್ದಿದ್ದರೆ ಮತ್ತು ಅಲ್ಲಿನ ಮತಪಟ್ಟಿಯಿಂದ 5,000 ಮತದಾರರ ಹೆಸರುಗಳನ್ನು ಅಳಿಸಿ ಹಾಕಿದ್ದರೇ, ಆ 5,000 ಮತದಾರರ ಚುನಾವಣೆಯಿಂದ ಹೊರಗುಳಿಯುವುದು ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಲಿದೆ ಎನ್ನುವುದು ಪ್ರಮುಖಾಂಶ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿದ ಎಸ್‌ಐಆರ್‌ ಪ್ರಕ್ರಿಯೆ ಮೇಲೆ ಅನೇಕ ಪ್ರಶ್ನೆಗಳನ್ನು ಎಬ್ಬಿಸದೇ ಇರುವುದಿಲ್ಲ. ಉದ್ದೇಶಪೂರ್ವಕವಾಗಿ ಕೆಲವು ನಿರ್ದಿಷ್ಟ ಸಮುದಾಯ ಅಥವಾ ನಿರ್ದಿಷ್ಟ ಸಿದ್ಧಾಂತವನ್ನು ಅನುಸರಿಸುವ ಮತದಾರರ ಹೆಸರುಗಳನ್ನು ಮತ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವಾದಕ್ಕೆ ಈ ಆತಂಕಕಾರಿ ವಿಷಯ ಪುಷ್ಠಿ ನೀಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

2021ರಲ್ಲಿ ಅನೇಕ ಬಿಜೆಪಿ ಮತ್ತು ಟಿಎಂಸಿ ಅಭ್ಯರ್ಥಿಗಳು ಅತ್ಯಲ್ಪ ಮತಗಳಿಂದ ಸೋತಿದ್ದಾರೆ ಅಥವಾ ಗೆದ್ದಿದ್ದಾರೆ. ಈ ಅಳಿಸಿ ಹಾಕಲಾದ ಮತಗಳು ತಮ್ಮ ಪರವಾಗಿದ್ದವು ಎಂದು ಎರಡೂ ಪಕ್ಷಗಳು ಪರಸ್ಪರ ದೂಷಿಸುತ್ತಿವೆ. ಈ ಎಸ್‌ಐಆರ್‌ ಪ್ರಕ್ರಿಯೆಯ ಅಂಕಿಅಂಶಗಳು ಹೊರಬಂದ ನಂತರ, ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ ಎನ್ನುವುದು ಕೂಡ ಉಲ್ಲೇಖನೀಯ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ಮುಖ್ಯ. ಗೆಲುವಿನ ಅಂತರಕ್ಕಿಂತ ಹೆಚ್ಚಿನ ಮತಗಳು ಪಟ್ಟಿಯಿಂದ ಮಾಯವಾದಾಗ ಅದು ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸಲಿದೆ ಎನ್ನುವುದರಲ್ಲಿ ಸಂಶಯವಿಲ್ಲ.

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಹೊರಬಿದ್ದ ದತ್ತಾಂಶಗಳು ಹಲವು ಕುತೂಹಲಕಾರಿ ಸತ್ಯಗಳನ್ನು ಬಿಚ್ಚಿಟ್ಟಿವೆ. ರಾಜ್ಯಾದ್ಯಂತ ಸುಮಾರು 91 ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದು ರಾಜ್ಯದ ಒಟ್ಟು ಮತದಾರರ ಸುಮಾರು ಶೇ.12ರಷ್ಟು ಮತಗಳನ್ನು ಕಡಿಮೆಗೊಳಿಸಿದೆ.

ಬಲರಾಮಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 273 ಮತಗಳಿಂದ ಗೆದ್ದಿತ್ತು, ಆದರೆ ಇಲ್ಲಿ 1,000ಕ್ಕೂ ಹೆಚ್ಚು ಮತದಾರರ ಹೆಸರನ್ನು ಎಸ್‌ಐಆರ್‌ ಪ್ರಕ್ರಿಯೆ ಮೂಲಕ ಅಳಿಸಲಾಗಿದೆ. ಕೇತುಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ಅಂತರ 12,467 ಮತಗಳಷ್ಟೆ. ಆದರೆ, ಈ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ 26,000ಕ್ಕೂ ಹೆಚ್ಚು ಮತದಾರರ ಹೆಸರನ್ನು ಎಸ್‌ಐಆರ್‌ ಪ್ರಕ್ರಿಯೆ ಮೂಲಕ ಅಳಿಸಲಾಗಿದೆ. ಪಾಂಡವೇಶ್ವರ/ಪಾಂಡಬೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ಅಂತರವಿದ್ದಿದ್ದು ಕೇವಲ 3,350 ಮತಗಳು ಮಾತ್ರ. ಆದರೇ, ಇದಕ್ಕಿಂತ ಅಧಿಕವಾಗಿ ಈಗ ಮತದಾರರ ಹೆಸರನ್ನು ಅಲ್ಲಿ ಅಳಿಸಲಾಗಿದೆ.

ಅಂಕಿಅಂಶಗಳು ಹೇಳುವ ಪ್ರಕಾರ, ಮಾಲ್ಡಾ, ಮುರ್ಷಿದಾಬಾದ್ ಮತ್ತು ಉತ್ತರ 24 ಪರಗಣದಂತಹ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ. ಮುರ್ಷಿದಾಬಾದ್ ಒಂದರಲ್ಲೇ ನ್ಯಾಯಾಂಗ ಸಮಿತಿಯ ಪರಿಶೀಲನೆಯ ನಂತರ ಸುಮಾರು 4.55 ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇದು “ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ” ಎಂಬ ರಾಜಕೀಯ ಆರೋಪಗಳಿಗೆ ಕಾರಣವಾಗಿದೆ ಎನ್ನುವುದು ಕೂಡ ಮುಖ್ಯಾಂಶ.

ತಾಂತ್ರಿಕದೋಷಅಥವಾವ್ಯವಸ್ಥಿತಪಿತೂರಿ?

ಮತಪಟ್ಟಿಯಲ್ಲಿ ಈ ಮಟ್ಟಿಗಿನ ಬದಲಾವಣೆಗೆ ಚುನಾವಣಾ ಆಯೋಗ ತನ್ನದೇ ಆದ ಕಾರಣಗಳನ್ನು ನೀಡಿದೆ. ಮೊದಲ ಬಾರಿಗೆ ಮತದಾರರ ಪಟ್ಟಿ ಸರಿಪಡಿಸಲು AI ತಂತ್ರಜ್ಞಾನ ಬಳಸಲಾಗಿದೆ. ಒಂದೇ ರೀತಿಯ ಮುಖಲಕ್ಷಣ ಅಥವಾ ಹೆಸರುಗಳಲ್ಲಿನ ಸಣ್ಣ ವ್ಯತ್ಯಾಸಗಳನ್ನು ಸಾಫ್ಟ್‌ವೇರ್ “ಡ್ಯೂಪ್ಲಿಕೇಟ್” ಎಂದು ಗುರುತಿಸಿದೆ. ಪೌರತ್ವ ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸದ ಕಾರಣ ಅನೇಕ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಸಮರ್ಥಿಸಿಕೊಳ್ಳಲಾಗುತ್ತಿದೆ.

ರಾಜಕೀಯ ಮೇಲಾಟಗಳ ಬಗ್ಗೆಯೂ ಚರ್ಚೆ ಮೇಲೆದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, “ಬಿಜೆಪಿಯು ಕೇಂದ್ರ ಏಜೆನ್ಸಿಗಳನ್ನು ಬಳಸಿ ಉದ್ದೇಶಪೂರ್ವಕವಾಗಿ ಟಿಎಂಸಿ ಬೆಂಬಲಿಗರ ಮತಗಳನ್ನು ಕಡಿತಗೊಳಿಸುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ. “ಬಾಂಗ್ಲಾದೇಶದ ನುಸುಳುಕೋರರ ಹೆಸರುಗಳು ಪಟ್ಟಿಯಲ್ಲಿದ್ದು, ಪಾರದರ್ಶಕ ಚುನಾವಣೆಗಾಗಿ ಅವುಗಳನ್ನು ಮತಪಟ್ಟಿಯಿಂದ ಅಳಿಸಿ ಹಾಕುವುದು ಅನಿವಾರ್ಯ” ಎನ್ನುವುದು ಬಿಜೆಪಿಯ ವಾದವಾಗಿದೆ.

ಒಟ್ಟಿನಲ್ಲಿ, ಚುನಾವಣೆಗಳಲ್ಲಿ ಒಂದು ಮತ ಗೆಲುವು ಮತ್ತು ಸೋಲನ್ನು ನಿರ್ಧರಿಸಬಲ್ಲ ಇಂದಿನ ರಾಜಕೀಯ ಕಾಲಘಟ್ಟದಲ್ಲಿ, ಲಕ್ಷಾಂತರ ಮತದಾರರ ಹೆಸರುಗಳನ್ನು ಮತಪಟ್ಟಿತಯಿಂದ ಇಲ್ಲದಂತೆ ಮಾಡುವುದು ಕೇವಲ ತಾಂತ್ರಿಕ ವಿಷಯವಾಗಿ ಉಳಿದಿಲ್ಲ, ಅದು ರಾಜಕೀಯ ಪಿತೂರಿಯ ಭಾಗವಾಗಿದೆಯೇ ಎನ್ನುವ ಪ್ರಶ್ನೆಯನ್ನೂ ಮೂಡಿಸಿದೆ. ಈ 44 ಕ್ಷೇತ್ರಗಳಲ್ಲಿನ ಎಸ್‌ಐಆರ್‌ ಪ್ರಕ್ರಿಯೆ ಮೂಲಕದ ಆದ ಬದಲಾವಣೆ 2026ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಅಥವಾ ಪ್ರತಿಪಕ್ಷದ ಅಳಿವು-ಉಳಿವಿನ ಪ್ರಶ್ನೆಯಾಗಲಿದೆ ಎನ್ನುವುದರಲ್ಲಿ ಅನುಮಾನವಿಲ್ಲ.  

IMG 20260316 WA0002
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...