ಬಜೆಟ್‌ | ಕ್ರೀಡಾ ಕ್ಷೇತ್ರ ಕಡೆಗಣಿಸದ ಸಿಎಂ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕನ್ನಡಿಗರು ಪದಕ ಗೆದ್ದರೆ ಕೋಟ್ಯಾಧೀಶರು!

Date:

Advertisements

ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಿದರು. ಈ ವೇಳೆ ಕ್ರೀಡಾ ಕ್ಷೇತ್ರಕ್ಕೂ ಭರ್ಜರಿ ಘೋಷಣೆ ಮಾಡಿದ್ದು, ಕ್ರೀಡಾಳುಗಳು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ ಕೋಟ್ಯಾಧೀಶರಾಗುವ ಅವಕಾಶ ನೀಡಿದ್ದಾರೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರೀ ಮೊತ್ತದ ಬಹುಮಾನವನ್ನು ಘೋಷಿಸಿದ್ದಾರೆ. ಆ ಮೂಲಕ ಕ್ರೀಡಾಳುಗಳು ಪದಕ ಗೆಲ್ಲುವ ಹುಮ್ಮಸ್ಸಿಗೆ ಆರ್ಥಿಕ ಬೆಂಬಲ ಘೋಷಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಲ್ಲಿ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಮತ್ತು ಕಂಚಿನ ಪದಕ ಗೆದ್ದಲ್ಲಿ 2 ಕೋಟಿ ರೂಪಾಯಿಗಳನ್ನು ಬಹುಮಾನದ ರೂಪವಾಗಿ ನೀಡಲಾಗುವುದು ಎಂದು ಸಿಎಂ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Advertisements

ಅದೇ ರೀತಿ, ಏಷಿಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಸ್ಪೋರ್ಟ್ಸ್ ಸಿಟಿ ಇನ್ನು ಪ್ರತಿ ವರ್ಷವೂ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲು ಬೆಂಗಳೂರು ಉತ್ತರ ತಾಲೂಕಿನಲ್ಲಿ 70 ಎಕರೆ ವಿಸ್ತೀರ್ಣದಲ್ಲಿ ಸ್ಪೋರ್ಟ್ಸ್ ಸಿಟಿಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಉಳಿದಂತೆ ಘೋಷಿಸಿರುವ ವಿವರಗಳು ಹೀಗಿದೆ:

  • ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಗೆ ಕ್ರಮ
  • ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ
  • ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು Rifle Shooting Association, Hockey Karnataka, Amateur Boxing Association, Archery Association, Athletic Association, Kayaking and Canoeing Academy, Cycling Academy Vijayapura ಹಾಗೂ Fencing Association ಗಳಿಗೆ ಒಟ್ಟಾರೆ 12 ಕೋಟಿ ರೂ. ಅನುದಾನ ನೀಡಲಾಗುವುದು.
  • ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ.
  • ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯ
  • ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳ ನಿರ್ಮಾಣ.
  • ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡ
  • ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X