ಬಿ ಆರ್ ಪಾಟೀಲ್ ಮಾಡಿರುವುದು ಗಂಭೀರ ಆರೋಪವಲ್ಲ: ಗೃಹ ಸಚಿವ ಜಿ ಪರಮೇಶ್ವರ್‌

Date:

ಬಿ ಆರ್ ಪಾಟೀಲ್ ಅವರು ಮಾಡಿರುವುದು ಗಂಭೀರ ಆರೋಪವಲ್ಲ. ಅವರು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ, ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದ್ದಾರೆ.

- Advertisement -

ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್ ಕೆ ಪಾಟೀಲ್ ಅವರು ಗಣಿ ಅಕ್ರಮದ ಪತ್ರ ಬರೆದಿದ್ದಾರೆ. ಗಣಿ ಅಕ್ರಮದಲ್ಲಿ 1.5 ಲಕ್ಷ ಕೋಟಿ ರೂ. ದುರುಪಯೋಗವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ಲೂಟಿ ಮಾಡಿದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಲಹೆ ನೀಡಿ ಈ ಪತ್ರ ಬರೆದಿದ್ದಾರೆ. ನಾವು ಕೂಡ ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಹೇಳಿದ್ದೇವೆ, ನಾನು ಎಂದಿಗೂ ಯಾರ ಮೇಲೂ ಉತ್ತಡ ಹೇರಿಲ್ಲ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಹೊರಟಿದ್ದೇವೆ. ಆನೆಗೊಂದಿ ಭಾಗದಲ್ಲಿ ಡ್ರಗ್ಸ್ ತಡೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಮತ್ತು ಆನೆಗೊಂದಿ ಭಾಗದಲ್ಲಿ ಅವಶ್ಯಕತೆ ಇದ್ದರೆ, ಪೊಲೀಸ್‌ ಠಾಣೆ ಸ್ಥಾಪಿಸುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ನಾವು ರಾಜ್ಯದಲ್ಲಿ ಎರಡು ವರ್ಷದಿಂದ ಜನಪರ ಕೆಲಸ ಮಾಡುತ್ತಿದ್ದೇವೆ. ಕೊಟ್ಟ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಲಕ್ಷ ಕೋಟಿ ರೂ. ಖರ್ಚು ಮಾಡಿದ್ದೇವೆ. ಆದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ, ಸಬ್ ಇನ್ಸ್‌ಪೆಕ್ಟರ್‌ ಹಗರಣದ ನಂತರ ನೇಮಕಾತಿಯಾಗಿಲ್ಲ, ರಾಜ್ಯದಲ್ಲಿ ಸಾವಿರಾರು ಪಿಎಸ್ಐಗಳ ಸ್ಥಾನಗಳು ಖಾಲಿಯಾಗಿವೆ. ಶೀಘ್ರ ನೇಮಕ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಭೋಸರಾಜು, ಸಂಸದ ರಾಜಶೇಖರ್ ಹಿಟ್ನಾಳ್‌, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ್ ಹಿಟ್ನಾಳ್‌, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೃಷ್ಣ ಇಟ್ಟಂಗಿ ಮತ್ತು ನಗರ ಸಭೆ ಸ್ಥಾಯಿ ಸಮಿತಿ ಸದಸ್ಯ ಅಕ್ಬರ್ ಪಾಷ ಪಲ್ಟನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...