ವರ್ಷಾಚರಣೆ ಸಂಭ್ರಮದಲ್ಲಿರುವ ಸರ್ಕಾರ ರೈತರಿಗೆ ಯಾವ ಕೊಡುಗೆ ಕೊಟ್ಟಿದೆ: ಕುಮಾರಸ್ವಾಮಿ ಪ್ರಶ್ನೆ

Date:

Advertisements

“ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣ ರೈತರ ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ” ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ” ಎಂದು ತರಾಟೆಗೆ ತೆಗೆದುಕೊಂಡರು.

“ಕಳೆದ ಒಂದು ವರ್ಷದಲ್ಲಿ ಎಷ್ಟು ಮಂತ್ರಿಗಳು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಸಮಸ್ಯೆಗಳ ಬಗ್ಗೆ ಏನು ಸೂಚನೆಗಳನ್ನು ಕೊಟ್ಟಿದ್ದಾರೆ. ಜನರ ಕಷ್ಟಗಳನ್ನು ಬಗೆಹರಿಸಿದ್ದಾರೆಯೇ? ಮುಖ್ಯಮಂತ್ರಿಗಳು ಸಭೆ ನಡೆಸಿ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದರು. ಆದರೆ, ಜನರ ಕೆಲಸಗಳು ಏನಾಗಿವೆ? ಅಭಿವೃದ್ಧಿ ಕೆಲಸಗಳು ಎಲ್ಲಾದರೂ ಆಗಿವೆಯೇ? ಕೇವಲ ಗ್ಯಾರಂಟಿಗಳ ಹೆಸರು ಹೇಳಿಕೊಂಡು ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

Advertisements

“ರಾಜ್ಯದ ನೀರಾವರಿ ಯೋಜನೆಗಳ ಪರಿಸ್ಥಿತಿ ಏನಾಗಿದೆ? ರಸ್ತೆಯ ಪರಿಸ್ಥಿತಿ ಹೇಗಾಗಿದೆ? ಕಳೆದ ಒಂದು ವರ್ಷದಿಂದ ಬ್ರ್ಯಾಂಡ್ ಬೆಂಗಳೂರು ಏನಾಗಿದೆ? ಮಳೆ ಬಂದು ಬೆಂಗಳೂರಿನ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಈಗ ಕಣ್ಣಾರೆ ನೋಡುತ್ತಿದ್ದೇವೆ. ಎರಡು ದಿನ ಸುರಿದ ಮಳೆಗೆ ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ. ಮನೆಗಳಿಗೆ ಬೀಗ ಹಾಕಿ ಹೋಟೆಲ್‌ಗೆ ಹೋಗಿ ಜೀವನ ಮಾಡುತ್ತಿದ್ದಾರೆ” ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

35,471 ಕಡತಗಳು ವಿಲೇವಾರಿ ಬಾಕಿ

“ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇಲಾಖೆಗಳ ಕೆಲಸ ನೋಡಿದರೆ ಅರ್ಥ ಆಗುತ್ತದೆ. ಎಂಟು ಪ್ರಮುಖ ಇಲಾಖೆಗಳಲ್ಲಿ 35,471 ಕಡತಗಳು ವಿಲೇವಾರಿ ಆಗಿಲ್ಲ ಎಂಬ ವರದಿಯನ್ನು ಓದಿದೆ. ಇದು ಸರ್ಕಾರದ ಸಾಧನೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ವರ್ಗಾವಣೆಗೆ CSR ಫಂಡ್ ಸಂಜ್ಞೆಯಾಗಿ ಬಳಕೆ

“ಚುನಾವಣೆ ನಂತರ ಓರ್ವ ಮಂತ್ರಿಯಾದರೂ ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಾ? ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಕೆಲಸ ಮಾಡಿಸಿದ್ದಾರಾ? ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ನಾಡಿನ ಅಭಿವೃದ್ಧಿಗೆ ಪೂರಕವಾದ ಕೆಲಸ ಆಗಿಲ್ಲ. ಸರ್ಕಾರದ ಐದು ವರ್ಷದ ಆಡಳಿತಾತ್ಮಕ ಮಂಜೂರಾತಿ ಮುಂದುವರಿಸಿದ್ದು ಬಿಟ್ಟರೆ ಏನೂ ಆಗಿಲ್ಲ. ವರ್ಗಾವಣೆ ದಂಧೆಯೂ ನಿಂತಿಲ್ಲ. ವರ್ಗಾವಣೆಗೆ ಸಿ ಎಸ್ ಆರ್ ಫಂಡ್ ಹೆಸರನ್ನು ಸಂಜ್ಞೆಯಾಗಿ ಬಳಕೆ ಮಾಡಲಾಗುತ್ತಿದೆ” ಎಂದು ಆರೋಪ ಮಾಡಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X