ಭಾರತ-ಅಮೆರಿಕ ಒಪ್ಪಂದದ ಕುರಿತು ಎನ್‌ಡಿಎ ಸಂಸದರಿಗೆ ಮೋದಿ ಹೇಳಿದ್ದೇನು?

Date:

ಟ್ರಂಪ್ ಮತ್ತು ಮೋದಿ ಫೋನ್‌ ಮಾತುಕತೆ ನಡೆಸಿದ್ದು, ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಿದ್ದಾರೆ. ಬಳಿಕ, ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಸಂಸದರೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪರಿಣಾಮಗಳ ಬಗ್ಗೆ ಸಭೆಯಲ್ಲಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

- Advertisement -

ನಡೆಯುತ್ತಿರುವ ಸಂಸತ್ ಅಧಿವೇಶನದ ನಡುವೆ ಈ ಸಭೆ ನಡೆದಿದೆ. “ಅಮೆರಿಕ ಜೊತೆಗಿನ ಒಪ್ಪಂದವು ದ್ವಿಪಕ್ಷೀಯ ಸಂಬಂಧಗಳಿಗೆ ‘ಉತ್ತಮ ವಾತಾವರಣ’ವನ್ನು ಸೃಷ್ಟಿಸಿದ ಮೈಲಿಗಲ್ಲು. ಮಾತುಕತೆಯ ಸಮಯದಲ್ಲಿ ಹಲವು ಸವಾಲುಗಳಿದ್ದವು. ಒಪ್ಪಂದದ ಕುರಿತು ವಿಮರ್ಶಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಆದರೂ, ಸರ್ಕಾರ ದೃಢನಿಶ್ಚಯದಿಂದ ಮುಂದುವರಿದಿದೆ. ನಮ್ಮ ತಾಳ್ಮೆ ಫಲ ನೀಡಿದೆ” ಎಂದು ಮೋದಿ ಹೇಳಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಅಲ್ಲದೆ, ಸಭೆಯಲ್ಲಿ ಮೋದಿ ಅವರು ತಮ್ಮ ಎನ್‌ಡಿಎ ಸಂಸದರಿಗೆ ಕಲಾಪದ ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗುವಂತೆ ಮತ್ತು ಸರ್ಕಾರದ ಸಾಧನೆಗಳನ್ನು ಸಾರ್ವಜನಿಕರಿಗೆ ನೇರವಾಗಿ ತಿಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ, ಮೋದಿ ಮತ್ತು ಟ್ರಂಪ್ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ವ್ಯಾಪಾರ ಒಪ್ಪಂದದ ಚರ್ಚೆಗಳು ನಡೆದಿವೆ. ಒಪ್ಪಂದದ ಅಡಿಯಲ್ಲಿ, ಭಾರತೀಯ ಸರಕುಗಳ ಮೇಲಿನ ಅಮೆರಿಕ ಸುಂಕವು 50%ನಿಂದ 18%ಗೆ ಇಳಿಸಲಾಗುತ್ತದೆ. ಅಂತೆಯೇ, ಅಮೆರಿಕದ ಮೇಲಿನ ಭಾರತದ ಸುಂಕವು 16%ನಿಂದ ಶೂನ್ಯಕ್ಕೆ (0%) ಕಡಿತಗೊಳ್ಳಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಅದನ್ನು, ಮೋದಿ ಕೂಡ ಸಮ್ಮತಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...