ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಮತದಾರರಿಗೆ ಇಷ್ಟು ಸ್ಯಾಡಿಸ್ಟಿಕ್ ನೇಚರ್ ಇರಬಾರದು: ಎಂ ಲಕ್ಷ್ಮಣ್ ಬೇಸರ

Date:

ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಅವರ ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅವಮಾನ ಮಾಡುತ್ತೀರಿ ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಮತದಾರರನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಪ್ರಶ್ನಿಸಿದರು.

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರಯ ಮಾತನಾಡಿ, “ನನ್ನನ್ನು ಸೋಲಿಸಿ, ಪರವಾಗಿಲ್ಲ. ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಮೈಸೂರಿಗೆ ಏನು ಕೊಟ್ರು? ಆದರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಸಾಹೇಬರು
ಮನಸಲ್ಲಿ ಬಹಳ ನೊಂದಿದ್ದಾರೆ. ಯಾವುದನ್ನೂ ಹೇಳಿಕೊಳ್ಳೋದಿಲ್ಲ” ಎಂದರು.

‘ಗ್ಯಾರಂಟಿಯನ್ನು ಜನ ತಿರಸ್ಕರಿಸಿದ್ದಾರೆ’

“ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ನಮ್ನ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನರು ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತರ್ಥ. ಹೀಗಾಗಿ ಗ್ಯಾರಂಟಿ ನಿಲ್ಲಿಸೋದೆ ಒಳಿತು. ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು” ಎಂದು ಹೇಳಿದರು.

“ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600 ಕ್ಕೂ ಹೆಚ್ಚು ಮತ ನೀಡಿದ್ರೆ. ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ. ಹಳೆ ಮೈಸೂರು ಭಾಗದ ಎಂಟು ಜನ ಒಕ್ಕಲಿಗರನ್ನ ಸೋಲಿಸಿದ್ದೀರಾ. ನಾವು ಏನು ಅನ್ಯಾಯ ಮಾಡಿದ್ದೇವೆ ಹೇಳಿ. ಜೆಡಿಎಸ್ ಬಿಜೆಪಿಯಲ್ಲಿ ಇರುವವರು ಮಾತ್ರ ಒಕ್ಕಲಿಗರಾ? ನಾವು ಒಕ್ಕಲಿಗರು ಅಂತ ಪ್ರೂವ್ ಮಾಡಲಿಕ್ಕೆ ಏನು ಮಾಡಬೇಕು” ಎಂದು ಪ್ರಶ್ನಿಸಿದರು.

“ಬಿಜೆಪಿ ಅಭ್ಯರ್ಥಿ ಯದುವೀರ್ ಜನರನ್ನ ಎಷ್ಟರ ಮಟ್ಟಿಗೆ ಅರಮನೆಗೆ ಬಿಟ್ಟುಕೊಳ್ತಾರೋ ಇಲ್ಲವೋ ಗೊತ್ತಿಲ್ಲ. ನಾಳೆಯಿಂದಲೇ ನಾನು ಜನರ ಸಮಸ್ಯೆ ಪರಿಹರಿಸಲು ಮುಂದಾಗುತ್ತೇನೆ. ನನಗೆ ಮತ ಕೊಟ್ಟವರು, ಕೊಡದೆ ಇರುವವರು ಎಲ್ಲರು ನನ್ನ ಸಂಪರ್ಕ ಮಾಡಬಹುದು. ನಾಳೆಯೆ ನನ್ನ ಕಚೇರಿ ಸಹ ತೆರೆಯುತ್ತೇನೆ. ಆ ಕಚೇರಿಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X