ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ : ಡಿ ಕೆ ಶಿವಕುಮಾರ್

Date:

  • ‘ಪೊಲೀಸರು ಬಿಜೆಪಿ ಏಜೆಂಟ್‌ ಆಗಿದ್ದಾರೆ’
  • ‘ಅತಿಕ್ರಮಣ ತಡೆಯಲು ಬಿಜೆಪಿಗೆ ಆಗುತ್ತಿಲ್ಲ’

ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಅಮುಲ್ ವಿವಾದದ ಕುರಿತು ಮಾತನಾಡಿದ್ದಾರೆ.

“ನಂದಿನಿ ನಮ್ಮ ರೈತರ ಸಂಸ್ಥೆ. ರಾಜ್ಯದ 80 ಲಕ್ಷ ರೈತರು ಅಧಿಕೃತವಾಗಿ ಸಹಕಾರ ಸಂಸ್ಥೆ ಸದಸ್ಯತ್ವ ಪಡೆದು ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಈಗ ಅವರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ. ಜಾನುವಾರುಗಳ ಮೇವಿನ ಬೆಲೆ ಹೆಚ್ಚಾಗಿದ್ದರೂ ಹಾಲಿನ ದರ ಹೆಚ್ಚಳ ಮಾಡಿ ಅವರಿಗೆ ನೆರವು ನೀಡಲು ಆಗಿಲ್ಲ” ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

“ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಹೇಳಿದ್ದ ಬಿಜೆಪಿ ಅದನ್ನು ಮಾಡುತ್ತಿಲ್ಲ. ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್ ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ರೈತರಿಗೆ ನಾವು ಬೆಂಬಲ ಬೆಲೆ ನೀಡಿ ಅವರ ರಕ್ಷಣೆ ಮಾಡಬೇಕಾಗಿದೆ. ಇದೇ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಬಿಜೆಪಿ ಸರ್ಕಾರ, ಸಹಕಾರಿ ಸಚಿವರಿಗೆ ಈ ಅಮುಲ್‌ ಉತ್ಪನ್ನಗಳ ಅತಿಕ್ರಮಣವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಈ ವಿಚಾರವಾಗಿ ಕೈಗೆ ಬಳೆ ತೊಟ್ಟುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

“ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೆ ಪದೇ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೇಲೆ ಇಡಿ ದುರ್ಬಳಕೆ ಮಾಡಿಕೊಳ್ಳಲು ಪಿತೂರಿ ನಡೆಯುತ್ತಿದೆ. ಚುನಾವಣೆ ಸಮಯದಲ್ಲಿ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸತ್ಯಮೇವ ಜಯತೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, “ಪಕ್ಷದ ಅಭ್ಯರ್ಥಿ ತೀರ್ಮಾನ ವಿಚಾರವಾಗಿ ನಮಗೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ. ದೆಹಲಿ ನಾಯಕರು ನಮಗೆ ದಿನಾಂಕ ತಿಳಿಸಿದ ನಂತರ ನಾವು ಕಾರ್ಯಕ್ರಮ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...