ಚುನಾವಣಾ ಬಾಂಡ್ | ಪ್ರಧಾನಿ ಮೋದಿಯವರಿಗೆ ಅಷ್ಟೊಂದು ಭಯ ಯಾಕೆ: ಜೈರಾಮ್ ರಮೇಶ್ ಪ್ರಶ್ನೆ

Date:

ಚುನಾವಣಾ ಬಾಂಡ್‌ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್‌, ಅವರ ಮೌನವನ್ನು ಪ್ರಶ್ನಿಸಿದೆ.

- Advertisement -

ಬುಧವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಹೊಸ ಉದ್ಘಾಟನೆಗಳಿಗೆ, ಮರುಬ್ರಾಂಡಿಂಗ್‌ಗೆ ಅಥವಾ ಹಿಂದಿನ ಕೆಲಸಕ್ಕಾಗಿ ಕ್ರೆಡಿಟ್ ಪಡೆಯಲು ಮೋದಿಯವರು ದೇಶಾದ್ಯಂತ ಪ್ರವಾಸ ಮಾಡುತ್ತಿಲ್ಲ ಯಾಕೆ? ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈಗ ರದ್ದಾಗಿರುವ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಸಂಸ್ಥೆಗಳು ಮತ್ತು ಅವುಗಳನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ವಿವರಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಒಂದು ದಿನದ ನಂತರ ಸರ್ಕಾರದ ವಿರುದ್ಧ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‌ನಲ್ಲಿ ಸರಣಿ ಪ್ರಶ್ನೆ ಕೇಳಿರುವ ಜೈರಾಮ್ ರಮೇಶ್, ಯಾವ ರಾಜಕೀಯ ಪಕ್ಷಕ್ಕೆ ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದನ್ನು ತಡೆಯಲು ಅಥವಾ ವಿಳಂಬ ಮಾಡಲು ಮೋದಿ ಸರ್ಕಾರವು ಎಸ್‌ಬಿಐ ಮೂಲಕ ಸತತವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ಪ್ರಧಾನ ಮಂತ್ರಿಗಳು ಯಾಕಾಗಿ ಹೆದರುತ್ತಿದ್ದಾರೆ? ಚುನಾವಣಾ ಬಾಂಡ್‌ಗಳ ಅಂಕಿ-ಅಂಶಗಳು ಯಾವ ಹೊಸ ಹಗರಣವನ್ನು ಬಹಿರಂಗಪಡಿಸುತ್ತವೆ ಎಂದೋ? ಅವರು ಕೇಳಿದ್ದು, ತಮ್ಮ ಸರ್ಕಾರವು ಮೂಲಭೂತ ಜವಾಬ್ದಾರಿಗಳ ಬಗ್ಗೆಯೂ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

“ಇಡಿ, ಸಿಬಿಐ ಅಥವಾ ಐಟಿ ಇಲಾಖೆಯಿಂದ ದಾಳಿ ಅಥವಾ ತನಿಖೆ ನಡೆಸಿದ ಬಳಿಕ 30 ಕಂಪನಿಗಳಿಂದ 335 ಕೋಟಿ ದೇಣಿಗೆಗಳು ಬಂದಿದೆ. ಇವುಗಳು ಬಿಜೆಪಿಗೆ ಏಕೆ ದೇಣಿಗೆ ನೀಡಿವೆ? ಇಡಿ-ಸಿಬಿಐ-ಐಟಿ ತನಿಖೆಯ ಬೆದರಿಕೆಯ ಮೂಲಕ ಬಿಜೆಪಿ ಈ ಸಂಸ್ಥೆಗಳನ್ನು ಬೆದರಿಸಿ ಅವರಿಂದ ದೇಣಿಗೆ ವಸೂಲಿ ಮಾಡುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸೆಬಿಯು ನಾಲ್ಕು ಕಂಪೆನಿಗಳನ್ನು ಶೆಲ್ ಕಂಪೆನಿ ಎಂದು ಘೋಷಿಸಿತ್ತು. ಈ ನಾಲ್ಕು ಶೆಲ್ ಕಂಪನಿಗಳಿಂದ 4.9 ಕೋಟಿ ರೂಪಾಯಿಗಳನ್ನು ಬಿಜೆಪಿ ಏಕೆ ಸ್ವೀಕರಿಸಿದೆ. ಈ ಕಂಪನಿಗಳ ಮೂಲಕ ಯಾರ ಕಪ್ಪುಹಣವನ್ನು ಬಿಜೆಪಿಗೆ ತಲುಪಿಸಲಾಗಿದೆ? ಎಂದು ಜೈರಾಮ್ ರಮೇಶ್ ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಸರ್ಕಾರವು ನಿಯಮಗಳನ್ನು ತಿಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್, ಸಂಸದೀಯ ವ್ಯವಹಾರಗಳ ಕೈಪಿಡಿ ಮತ್ತು ಸರ್ಕಾರದ ಎಲ್ಲ ಸ್ಥಾಪಿತ ಮಾನದಂಡಗಳ ಪ್ರಕಾರ ಯಾವುದೇ ಕಾಯ್ದೆಗೆ ನಿಯಮಗಳಿವೆ. ಅದರ ಅಂಗೀಕಾರದ ಆರು ತಿಂಗಳೊಳಗೆ ರೂಪಿಸಬೇಕಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿಯಮಗಳನ್ನು ರೂಪಿಸಲು ಮೋದಿ ಸರ್ಕಾರವು ನಾಲ್ಕು ವರ್ಷ ಮತ್ತು ಮೂರು ತಿಂಗಳು ಏಕೆ ತೆಗೆದುಕೊಂಡಿತು? ಲೋಕಸಭೆ ಚುನಾವಣೆಗೂ ಕೆಲವು ದಿನಗಳು ಇರುವಾಗ ನಿಯಮಗಳು ಏಕೆ ಅನುಕೂಲಕರವಾಗಿ ಹೊರಬಂದಿವೆ? ರಮೇಶ್ ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಸಂಸ್ಥೆಗಳ ಸುಗಮ ಕಾರ್ಯನಿರ್ವಹಣೆಯು ಸರ್ಕಾರದ ಮೊದಲ ಮತ್ತು ಪ್ರಮುಖ ಆದ್ಯತೆ. ಆದರೆ, ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇವಲ ಒಬ್ಬನೇ ಚುನಾವಣಾ ಆಯುಕ್ತರನ್ನು ಹೊಂದುವ ಹಂತಕ್ಕೆ ಚುನಾವಣಾ ಆಯೋಗ ತಲುಪಿದ್ದು ಹೇಗೆ? ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಏಕಾಏಕಿ ರಾಜೀನಾಮೆ ನೀಡಿದ್ದು ಏಕೆ? ಎಂದು ಸುದೀರ್ಘ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...