ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

Date:

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ ಜೊತೆಗೆ ಬೇರೆ ರಾಜ್ಯಗಳನ್ನು ಕಡೆಗಣಿಸಿಲ್ಲ. ಯಾವುದೇ ತಾರತಮ್ಯ ಮಾಡದೆ ಬಜೆಟ್​ ಮಂಡಿಸಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

- Advertisement -

ಕೇಂದ್ರ ಬಜೆಟ್‌ ಕುರಿತು ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿದ ಅವರು, “ಉದ್ಯೋಗ ಸೃಷ್ಟಿ, ಕೃಷಿಗೆ ಕೇಂದ್ರ ಬಜೆಟ್​ನಲ್ಲಿ ಒತ್ತು ಕೊಟ್ಟಿದ್ದಾರೆ. ದೇಶದ ರೈತರ ಪರ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಐದು ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಆ ಮೂಲಕ ಬಡವರಿಗೆ ಅನುಕೂಲ ಆಗಲಿದೆ. ತೆರಿಗೆ ಪಾವತಿ ಮಿತಿಯನ್ನು ಏರಿಕೆ ಮಾಡಲಾಗಿದೆ. ಇದು ಮಧ್ಯಮ ವರ್ಗದವರಿಗೆ ಅನುಕೂಲ. ಒಂದು ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಕೊಡಲಾಗುತ್ತಿದೆ. ಕೈಗಾರಿಕಾ ತೆರಿಗೆ ಕಡಿಮೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ, ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ” ಎಂದರು.

ಬಿ ವೈ ವಿಜಯೇಂದ್ರ ಏನಂದ್ರು?

“2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ” ಎಂದಿದ್ದಾರೆ.

ಕರ್ನಾಟಕಕ್ಕೆ ಲಾಭವಾಗಲಿದೆ: ಬೊಮ್ಮಾಯಿ

ದೆಹಲಿಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, “ಕರ್ನಾಟಕಕ್ಕೆ ರೈಲು, ರಸ್ತೆ ನಿರ್ಮಾಣಕ್ಕೆ ಅನುದಾನ ಸಿಗಲಿದೆ. ಕೈಗಾರಿಕಾ ಕಾರಿಡಾರ್ ನಿರ್ಮಾಣದಿಂದ ಕರ್ನಾಟಕಕ್ಕೂ ಅನುಕೂಲವಾಗಲಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ನೀಡಿದೆ. ಬಡತನ ನಿರ್ಮೂಲನೆ, ಮನೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಬೇರೆ ಬೇರೆ ಯೋಜನೆಗಳ ಮೂಲಕ ಕರ್ನಾಟಕಕ್ಕೆ ಲಾಭವಾಗಲಿದೆ” ಎಂದರು.

ಕರ್ನಾಟಕಕ್ಕೆ ವೈಯಕ್ತಿಕ ಘೋಷಣೆ ಇಲ್ಲ: ಕಾರಜೋಳ

ಬಿಜೆಪಿ ಸಂಸದ ಗೋವಿಂದ ಕಾರಜೋಳ ಕೂಡ ಪ್ರತಿಕ್ರಿಯಿಸಿ, “ಕರ್ನಾಟಕದ ವಿಚಾರವಾಗಿ ವೈಯಕ್ತಿಕ ಘೋಷಣೆ ಇರುವುದಿಲ್ಲ. ಎಲ್ಲಾ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಘೋಷಣೆ ಮಾಡಲಾಗಿದೆ. ಕೇಂದ್ರ ಬಜೆಟ್​ನಲ್ಲಿ ರೈಲ್ವೆ, ನೀರಾವರಿ ಯೋಜನೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಬಡವರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಸಾಲ ಸೌಲಭ್ಯ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಹೇಳಿಕೆ ನೀಡಿ, “ಕೇಂದ್ರ ಬಜೆಟ್​​ನಲ್ಲಿ ಕೃಷಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಕ್ಷೇತ್ರ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಆಗುತ್ತೆ. ಬಿಹಾರ, ಆಂಧ್ರದಂತೆ ಎಲ್ಲ ರಾಜ್ಯಗಳಿಗೂ ಆದ್ಯತೆ ನೀಡಲಾಗುತ್ತದೆ” ಎಂದಿದ್ದಾರೆ.

ಮೋದಿಯವರಿಗೆ ದೇಶ ಮುಖ್ಯ: ಡಾ ಕೆ ಸುಧಾಕರ್

“ಜನ ಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಬಜೆಟ್​ ಮಂಡಿಸಲಾಗಿದೆ. ಪ್ರಧಾನಿ ಮೋದಿ ವೋಟ್ ಬ್ಯಾಂಕ್ ರಾಜಕಾರಣ ಮಾಡಲ್ಲ. ಮೋದಿಯವರಿಗೆ ರಾಜಕೀಯದ ಲಾಭ ನಷ್ಟಕ್ಕಿಂತ ದೇಶ ಮುಖ್ಯ. ವಿಶೇಷವಾಗಿ ಕಾಂಗ್ರೆಸ್​ ಸರ್ಕಾರಕ್ಕೆ ಬುದ್ಧಿ ಹೇಳುವ ಕೆಲಸ ಆಗಿದೆ” ಎಂದು ಸಂಸದ ಡಾ.ಕೆ.ಸುಧಾಕರ್​​  ಹೇಳಿದ್ದಾರೆ.

ಮಹಿಳೆಯರು, ರೈತರ ಪರ ಬಜೆಟ್: ಸಿ ಟಿ ರವಿ

ವಿಧಾನಸೌಧದಲ್ಲಿ ಪರಿಷತ್​ ಬಿಜೆಪಿ ಸದಸ್ಯ ಸಿ ಟಿ ರವಿ ಪ್ರತಿಕ್ರಿಯಿಸಿದ್ದು, “ಬಜೆಟ್​ನಲ್ಲಿ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ಕೊಟ್ಟಿದ್ದಾರೆ. 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ದಿಗೆ ತರಬೇತಿಗೆ ಆದ್ಯತೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿಗೆ 2.65 ಲಕ್ಷ ಕೋಟಿ ರೂ. ಹಂಚಿಕೆ ಮಾಡಿದ್ದಾರೆ. ದೇಶಾದ್ಯಂತ 12 ಕೈಗಾರಿಕಾ ಪಾರ್ಕ್ ಸ್ಥಾಪಿಸುವುದಾಗಿ ಘೋಷಣೆ ಮಾಡಲಾಗಿದೆ. ಇದು ಬಡವರ ಪರ, ಮಹಿಳೆಯರ ಪರ, ರೈತರ ಪರ ಬಜೆಟ್” ಎಂದು ಹೇಳಿದ್ದಾರೆ.​​

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...