ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ ಎಂಬುದನ್ನು ನವೆಂಬರ್ 10ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಬಿಜೆಪಿಗರು ಸುಖಾಸುಮ್ಮನೆ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ಅವರು ಏನೇ ತಿಪ್ಪರಲಾಗ ಹಾಕಿದರೂ ಕಾಂಗ್ರೆಸ್ ಸರ್ಕಾರ ಭದ್ರವಾಗಿಯೇ ಇರುತ್ತದೆ” ಎಂದು ಹೇಳಿದ್ದಾರೆ.
“65 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮೊದಲು ಬಿಜೆಪಿ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳಲಿ. ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.
“ನವೆಂಬರ್ 10ರವರೆಗೆ ಕಾದು ನೋಡಿ, ಬಿಜೆಪಿಯಲ್ಲಿ ಏನಾಗುತ್ತದೆ ಎಂಬುದು ಗೊತ್ತಾಗುತ್ತದೆ” ಎಂದು ಜಮೀರ್ ಹೇಳಿದ್ದಾರೆ.