ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಕಾಂಗ್ರೆಸ್ ಪ್ರಶ್ನೆ

Date:

Advertisements

ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ.

ಎಕ್ಸ್ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ ನೀಡಿದ್ದಾರೆ.

“ಬಾಗಲಕೋಟೆ – ಕುಡಚಿ ನಡುವಣ ರೈಲ್ವೇ ಮಾರ್ಗ ನೀಡಲು ಮೋದಿ ಸರ್ಕಾರ ವಿಫಲವಾಗಿದ್ದೇಕೆ? ಮಹಾದಾಯಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಮೋದಿ ಸರ್ಕಾರ ತಡೆ ಹಿಡಿದಿರುವುದೇಕೆ? ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ?” ಎಂದು ಮೂರು ಪ್ರಮುಖ ಪ್ರಶ್ನೆಗಳನ್ನು ಬಿಜೆಪಿ ಸರ್ಕಾರಕ್ಕೆ ಜೈರಾಮ್ ರಮೇಶ್ ಕೇಳಿದ್ದಾರೆ.

Advertisements

ಪ್ರಧಾನಿ ಮೋದಿ ಸುಳ್ಳಿನ ಬಗ್ಗೆ ಕಾಂಗ್ರೆಸ್ ನಾಯಕರ ಪಟ್ಟಿ

1. ಕಳೆದ 8 ವರ್ಷಗಳಿಂದ ನೈಋತ್ಯ ರೈಲ್ವೆಯಲ್ಲಿ ಬಾಗಲಕೋಟೆ ಮತ್ತು ಕುಡಚಿ ನಡುವಣ ರೈಲ್ವೇ ಮಾರ್ಗ ವಿಳಂಬವಾಗಿದೆ. 142 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಕೇವಲ 46 ಕಿ.ಮೀ ಅಂದರೆ ಕೇವಲ 33% ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. 2010-11 ರಲ್ಲಿ ಈ ಯೋಜನೆಗೆ 986 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ ಈಗ ಇದರ ಒಟ್ಟಾರೆ ವೆಚ್ಚ 1649 ಕೋಟಿಗೆ ಏರಿದೆ.

ಇದನ್ನು ಓದಿದ್ದೀರಾ?  ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

ಆರಂಭದಲ್ಲಿ 2016ಕ್ಕೆ ಈ ಯೋಜನೆ ಪೂರ್ಣಗೊಳ್ಳಬೇಕು ಎಂಬ ಗಡವು ನಿಗದಿ ಮಾಡಲಾಗಿತ್ತು. ಈಗ ಈ ಯೋಜನೆ 2027ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರ ಈ ಯೋಜನೆಗೆ ಉಚಿತವಾಗಿ ಭೂಮಿ ಹಾಗೂ ಯೋಜನೆಯ ವೆಚ್ಚದಲ್ಲಿ 50% ಅನುದಾನ ನೀಡುತ್ತಿದ್ದರು ಮೋದಿ ಸರ್ಕಾರ ಈ ಯೋಜನೆ ಜಾರಿ ಮಾಡಲು ವಿಫಲವಾಗಿದೆ. ಮಹತ್ವಾಕಾಂಕ್ಷಿ ರೈಲ್ವೆ ಯೋಜನೆ 11 ವರ್ಷಗಳ ವಿಳಂಬ ಎದುರಿಸುತ್ತಿರುವುದೇಕೆ? ಇದು ಮೋದಿ ಸರ್ಕಾರದ ಸಮರ್ಥತೆ ಹಾಗು ಕರ್ನಾಟಕ ವಿರೋಧಿ ಧೋರಣೆಗೆ ಸಾಕ್ಷಿ.

2. ಕಳೆದ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಘೋಷಣೆ ಮಾಡಿತು. ಒಂದು ವರ್ಷವಾದರೂ ಕೇಂದ್ರ ಸರ್ಕಾರ ಈ ಅನುದಾನದಲ್ಲಿ ನಯಾ ಪೈಸೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆ ಸಮಯದಲ್ಲಿ ಮೋದಿ ಅವರು ಮಹಾದಾಯಿ – ಕಳಸಾ ಬಂಡೂರಿ ಯೋಜನೆ ವಿಘ್ನಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದರು.

ಇದನ್ನು ಓದಿದ್ದೀರಾ?  ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಆದರೂ ಈ ವರ್ಷದ ಆರಂಭದಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಅನುಮತಿ ನೀಡಲು ನಿರಾಕರಿಸಿತು. ಬರ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರು ಹಾಗು ನೀರಾವರಿ ಪೂರೈಕೆಗೆ ಈ ಯೋಜನೆ ಮಹತ್ವದ್ದಾಗಿದೆ. ಮೋದಿ ಸರ್ಕಾರ ಇಂತಹ ಮಹತ್ವದ ಯೋಜನೆಗಳ ಬಗ್ಗೆ ನಿರ್ಲಕ್ಷ್ಯ ತೋರಿರುವುದೇಕೆ? ಕರ್ನಾಟಕದ ಜನತೆ ಮೇಲೆ ಪ್ರಧಾನಮಂತ್ರಿಗಳಿಗೆ ಯಾಕಿಷ್ಟು ದ್ವೇಷ?

3. ಬರ ಪರಿಸ್ಥಿತಿಯಲ್ಲಿ ಕರ್ನಾಟಕದ ಗ್ರಾಮೀಣ ಪ್ರದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಲ್ಲಿ ಕೂಲಿ ದಿನಗಳ ಪ್ರಮಾಣವನ್ನು 100ರಿಂದ 150ಕ್ಕೆ ಏರಿಕೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಬರ ಪೀಡಿತ ಪ್ರದೇಶಗಳಲ್ಲಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳಕ್ಕೆ ಕಾನೂನಿನಲ್ಲಿ ಅವಕಾಶವಿದ್ದರೂ ಮೋದಿ ಸರ್ಕಾರ ಈ ಯೋಜನೆ ವಿಸ್ತರಣೆ ಮಾಡಲು ವಿಫಲವಾಗಿದೆ. ಇದರ ಜೊತೆಗೆ ಮೋದಿ ಸರ್ಕಾರ ನರೇಗಾ ಕಾರ್ಮಿಕರಿಗೆ ನೀಡಬೇಕಾದ ಕೂಲಿಯ 1600 ಕೋಟಿ ಹಣವನ್ನು ಬಿಡುಗಡೆ ಮಾಡಿಲ್ಲ. ಮೋದಿ ಸರ್ಕಾರ ರಾಜ್ಯದ ನರೇಗಾ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡುವುದು ಯಾವಾಗ?

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X