ಅಹಂಕಾರ, ಅತಿರೇಕ ಹೆಚ್ಚಾದಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ: ಪ್ರಧಾನಿ ವಿರುದ್ಧ ಜೈರಾಮ್ ರಮೇಶ್ ಕಿಡಿ

Date:

ಒಬ್ಬ ಮನುಷ್ಯನ ಅಹಂಕಾರ ಮತ್ತು ಅತಿರೇಕ ಪ್ರಾಮುಖ್ಯತೆ ಪಡೆದುಕೊಂಡಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ ಸಂಭವಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

- Advertisement -

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇಂದು(ಆಗಸ್ಟ್ 2) 9ನೇ ಚಿರತೆ ಮೃತಪಟ್ಟ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಎಲ್ಲ ಸಾವುಗಳು ನಿರೀಕ್ಷಿತ ಮರಣ ಎಂಬ ವಾದವು ‘ಸಂಪೂರ್ಣ ಅಸಂಬದ್ಧವಾಗಿದೆ’ ಮತ್ತು ಅಂತಾರಾಷ್ಟ್ರೀಯ ಚಿರತೆ ತಜ್ಞರು ಇದನ್ನು ತಳ್ಳಿಹಾಕಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದರು.

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇಲ್ಲಿಯವರೆಗೂ ಒಟ್ಟು 9 ಚಿರತೆಗಳು ಸಾವನ್ನಪ್ಪಿವೆ. ಇವುಗಳಲ್ಲಿ ಆರು ಚಿರತೆಗಳು ಮತ್ತು ಮೂರು ಮರಿಗಳು ಸೇರಿವೆ. ಇಂದು ಸಾವನ್ನಪ್ಪಿದ ಚಿರತೆ ಮಾರ್ಚ್‌ನಿಂದ ಸಾವನ್ನಪ್ಪಿದ ಆರನೇ ಚಿರತೆಯಾಗಿದೆ.

ಏಳು ಗಂಡು, ಆರು ಹೆಣ್ಣು ಮತ್ತು ಒಂದು ಹೆಣ್ಣು ಮರಿ ಒಳಗೊಂಡ ಹದಿನಾಲ್ಕು ಚಿರತೆಗಳನ್ನು ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದೆ. ವನ್ಯ ಜೀವಿ ಪಶುವೈದ್ಯರು ಮತ್ತು ನಮೀಬಿಯಾದ ತಜ್ಞರನ್ನು ಒಳಗೊಂಡ ತಂಡ ಚಿರತೆಗಳ ಆರೋಗ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ದ್ವೇಷ ಭಾಷಣ ನಿಲ್ಲಿಸಿ, ಹೆಚ್ಚು ಸಿಸಿ ಟಿವಿ ಅಳವಡಿಸಿ: ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಳೆದ ವರ್ಷ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಚಿರತೆಗಳನ್ನು ಕರೆತಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿತ್ತು.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಇದನ್ನು ಸರ್ಕಾರವು ಪ್ರತಿಷ್ಠೆಯ ವಿಷಯವಾಗಿ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದೆ. “ಚಿರತೆಗಳನ್ನು ಒಂದೇ ಸ್ಥಳದಲ್ಲಿ ಇರಿಸುವ ಬದಲು, ಅವು ಯಾವುದೇ ರಾಜ್ಯ ಅಥವಾ ಯಾವುದೇ ಸರ್ಕಾರದ ಅಡಿಯಲ್ಲಿರಲಿ. ಅವುಗಳಿಗೆ ಒಂದು ಅಥವಾ ಹೆಚ್ಚಿನ ಆವಾಸಸ್ಥಾನಗಳನ್ನು ಏಕೆ ನಿರ್ಮಿಸಲು ಸಾಧ್ಯವಿಲ್ಲ” ಎಂದು ಪ್ರಶ್ನಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...