ಎಲ್ಲರನ್ನು ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ?: ಪ್ರಿಯಾಂಕ್ ಖರ್ಗೆ

Date:

ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

- Advertisement -

ಬಾಗಲಕೋಟೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಿರುದ್ಯೋಗ ರಹಿತ, ಬೆಲೆ ಏರಿಕೆ ನಿಯಂತ್ರಿಸುವ, ಆರ್ಥಿಕ ಸಬಲತೆಯ ಆಡಳಿತದ ಜನರ‌ ನಿರೀಕ್ಷೆ‌ ಹುಸಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಜನರಿಗೆ ಬಿಜೆಪಿ ಉಚಿತ ಯೋಜನೆ ಘೋಷಿಸಿದರೆ ಜನ ಕಲ್ಯಾಣಕ್ಕಾಗಿ, ಕಾಂಗ್ರೆಸ್ ಕೊಟ್ಟರೆ ಆರ್ಥಿಕ ದಿವಾಳಿಯಾಗುತ್ತದೆ ಎಂಬ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ಅಯುಷ್ಮಾನ್,‌ ನರೇಗಾ ಯೋಜನೆಗಳಲ್ಲಿ ರಾಜ್ಯದ ಪಾಲು ಶೇ 50ರಷ್ಟಿದ್ದರೂ, ಕೇಂದ್ರದ್ದೇ ಎನ್ನುವಂತೆ ಪ್ರಚಾರ ಪಡೆಯುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ರಾಜ್ಯದ ಹಿತಾಸಕ್ತಿ, ಜನರಿಗೆ ಸತ್ಯ ತಿಳಿಸುವುದಕ್ಕಾಗಿ ಕೋವಿಡ್ ಸಂದರ್ಭದಲ್ಲಿ ನಡೆದ‌ ₹40 ಸಾವಿರ ಕೋಟಿ ಮೊತ್ತ‌ ಹಗರಣದ ದಾಖಲೆಗಳನ್ನು ಯತ್ನಾಳ್‌ ಅವರು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

“ಕಾಂಗ್ರೆಸ್ ಆರೋಪ ಮಾಡಿದಾಗ ಸುಳ್ಳು ಎಂದು ಹೇಳುತಿದ್ದ ಬಿಜೆಪಿ ನಾಯಕರು ಎಲ್ಲಿದ್ದಾರೆ? ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಜನರಿಗೆ ಉತ್ತರಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...