2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು ಹೇಳಿ ಸಿದ್ದರಾಮಯ್ಯನವರೇ: ಎಚ್‌ಡಿಕೆ ಪ್ರಶ್ನೆ

Date:

Advertisements

2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರೆಂದು ಹೇಳಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ.

“ಜಾತಿಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಶ್ರೀಮಾನ್ ಸಿದ್ದರಾಮಯ್ಯನವರೇ ಸತ್ಯವನ್ನೇ ಹೇಳಿ. 2ಎ ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಇದು ನಿಮಗೂ ಗೊತ್ತು. 2ಎ ಪ್ರವರ್ಗದಲ್ಲಿ 101 ಜಾತಿಗಳಿವೆ. ಶೇ.15ರಷ್ಟು ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ” ಎಂದು ವ್ಯಂಗ್ಯವಾಡಿದ್ದಾರೆ.

“ಕಳೆದ 15-20 ವರ್ಷಗಳಲ್ಲಿ A B C D ಗ್ರೂಪ್‌ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್‌ ಪ್ರವೇಶ, ಇನ್ನಿತರೆ ಎಲ್ಲಾ ಸೌಲಭ್ಯಗಳ ಅಂಕಿ ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ?” ಎಂದಿದ್ದಾರೆ.

Advertisements

ವೃತ್ತಿಪರ ಕೋರ್ಸ್‌; ಅಂದರೆ ಮೆಡಿಕಲ್, ಡೆಂಟಲ್, ಎಂಜಿನಿಯರಿಂಗ್, ಡಿ ಫಾರ್ಮ, ಬಿ ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2A ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ(CET) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು.

2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ?

ಈ ಸುದ್ದಿ ಓದಿದ್ದೀರಾ? ‌ಮಂಡ್ಯ | ಅಂಬೇಡ್ಕರ್ ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ: ಎಂ ಸಿ ಬಸವರಾಜು

ಅತೀ.. ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ.. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನು ಕಂಡ ನೆಟ್ಟಿಗರು “ನೀವು ಮುಖ್ಯಮಂತ್ರಿಯಾಗಿದ್ದಾಗ ಏನು ಮಾಡ್ತಿದ್ರಿ ಕುಮಾರಸ್ವಾಮಿಯವರೇ, ಆಗ ನಿಮಿಗೆ ನೆನಪಿರಲಿಲ್ಲವೇ?. 3ಎ ವರ್ಗದಲ್ಲಿ 10+ ಜಾತಿಗಳು ಬರುತ್ತವೆ. ಅಲ್ಲಿ ಎಲ್ಲ ಸ್ಥಾನ ನುಂಗಿರುವ ಜಾತಿಗಳು ಯಾವುವು ಹೇಳಿ ನೋಡೋಣ” ಎಂದು ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X