ಸೂಡಾನ್‌ನಲ್ಲಿ ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ, `ವಿಶ್ವಗುರು’ ಏನು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ

Date:

  • ‘ಬಿಜೆಪಿ ನಾಯಕರೇ ಕನ್ನಡಿಗರ ಕಡೆ ಗಮನ ಕೊಡಿ’
  • ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ? ಎಂದ ಸಿದ್ದರಾಮಯ್ಯ

ಸೂಡಾನ್‌ನ ಸೇನೆ ಮತ್ತು ಅರೆಸೇನೆಗಳ ನಡುವಿನ ಕಿತ್ತಾಟಕ್ಕೆ ಇಡೀ ದೇಶವೇ ಬಲಿಯಾಗುತ್ತಿದೆ. ದುಡಿಮೆಗೆ ತೆರಳಿರುವ ಕರ್ನಾಟಕ ಮೂಲದ ಬುಡಕಟ್ಟು ಜನಾಂಗದವರು ಸಹ ಅಲ್ಲಿ ಸಿಲುಕಿದ್ದಾರೆ. ಈ ಕುರಿತು ಸಹಾಯ ಕೇಳಿದರೆ, ರಾಯಭಾರ ಕಚೇರಿ ಅಸಡ್ಡೆಯಿಂದ ಮಾತನಾಡಿದೆ.

- Advertisement -

“ನಮಗೇ ತಿನ್ನುವುದಕ್ಕೆ ಏನೂ ಇಲ್ಲ, ನಿಮಗೇನು ಮಾಡದು? ನೀವು ಇರುವ ಸ್ಥಳದಲ್ಲಿಯೇ ಬಾಗಿಲು ಹಾಕಿಕೊಂಡು ಇರಿ” ಎಂಬುದಾಗಿ ಸೂಡಾನ್‌ನ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸೂಡಾನ್‌ ರಾಯಭಾರ ಕಚೇರಿಯ ಹೇಳಿಕೆ ಎನ್ನಲಾದ ಸಾಲುಗಳನ್ನು ಹಂಚಿಕೊಂಡ ಸಿದ್ದರಾಮಯ್ಯ, “ಜಯಶಂಕರ್ ಅವರೇ, ಇದನ್ನು ಕೇಳಿ ಗಾಬರಿಯಾಗಲಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಸೂಡಾನ್‌ನಲ್ಲಿ‌ ಕಳೆದ 8-10 ದಿನಗಳಿಂದ ನಮ್ಮ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರು ತಿನ್ನಲು ಅನ್ನ ಇಲ್ಲದೆ, ಕುಡಿಯಲು ನೀರಿಲ್ಲದೆ ನರಳಾಡುತ್ತಿದ್ದಾರೆ. ನಮ್ಮ ‘ವಿಶ್ವಗುರು’ ಪ್ರಧಾನಿ ಮೋದಿ ಅವರು ಸೂಚನೆ -ಭರವಸೆಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.ಮೋದಿ

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಚುನಾವಣೆಯ ಬುರುಡೆ ಭಾಷಣಗಳ ಮಧ್ಯೆ ಬಿಡುವಾದರೆ ಸೂಡಾನ್‌ನಲ್ಲಿ‌ ಕಷ್ಟದಲ್ಲಿರುವ ಕನ್ನಡಿಗರ ಕಡೆ ಗಮನ ಕೊಡಿ” ಎಂದು ಟ್ವೀಟ್ ಮಾಡಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ಈಶ್ವರಪ್ಪನವರಿಗೆ ಫೋನ್ ಮಾಡಲು ಇರುವಷ್ಟು ಪುರುಸೊತ್ತು ಕನ್ನಡಿಗರ ರಕ್ಷಣೆಗೆ ಇಲ್ಲವೇ?” ಎಂದು ಕೇಳುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಸೂಡಾನ್‌ದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಸಂಘರ್ಷದಿಂದ ಯುದ್ಧ ಸಂಭವಿಸಿದೆ. ಅಲ್ಲಿ ಶಿವಮೊಗ್ಗ ಮೂಲದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಜನರು ಸಿಲುಕಿಕೊಂಡಿದ್ದಾರೆ.

ದೇಶಕ್ಕೆ ವಾಪಸ್ ಆಗಲು ಮತ್ತು ತಮ್ಮ ಜೀವ ರಕ್ಷಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಕುರಿತು ಸೂಡಾನ್ ರಾಯಭಾರ ಕಚೇರಿಗೆ ತೆರಳಿದರೆ, ‘ನಾವೇನು ಮಾಡೋಕೆ ಆಗಲ್ಲ’ ಎನ್ನುವ ಪ್ರತಿಕ್ರಿಯೆ ದೊರೆಕಿದ್ದು, ಕನ್ನಡಿಗರಿಗೆ ದಿಕ್ಕಿಲ್ಲದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...