ಕಂಡೋರ ಭೂಮಿ, ಬೆಟ್ಟಗುಡ್ಡ ಲೂಟಿ ಮಾಡಿದ್ದು ಯಾರಪ್ಪ ಶಿವಕುಮಾರ್:‌ ಕುಮಾರಸ್ವಾಮಿ ಪ್ರಶ್ನೆ

Date:

Advertisements
  • ‘ಡಿಕೆ ಶಿವಕುಮಾರ್ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ!‌’
  • ‘ಕನಕಪುರ ಬೆಂಗಳೂರಿಗೆ ಸೇರಿಸಿದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ’

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿಕೆ ಶಿವಕುಮಾರ್‌ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

“ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂಬ ಡಿಕೆ ಶಿವಕುಮಾರ್‌ ಮಾತಿಗೆ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ದರ್ಪದ ಮಾತುಗಳನ್ನು ಡಿಸಿಎಂ ಹೇಳಿದ್ದಾರೆ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ! ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ಬುದ್ಧಿವಂತಿಕೆ, ‘ಅಸಾಮಾನ್ಯ’ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ” ಎಂದು ಹರಿಹಾಯ್ದಿದ್ದಾರೆ.

Advertisements

“ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ” ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ. ಎಲ್ಲವೂ ನಿಗೂಢ!” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಗ್ನಿವೀರ’ ಯೋಜನೆ ಟೊಳ್ಳೆಂದು ಸಾರಿದೆ ಇಸ್ರೇಲ್ ಯುದ್ಧ!

“ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಎಚ್‌ ಡಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ, ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ” ಎಂದು ಪ್ರಶ್ನಿಸಿದ್ದಾರೆ.

“ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ನಾಡಪ್ರಭು ಕೆಂಪೇಗೌಡರು, ಕೆಂಗಲ್‌ ಹನುಮಂತಯ್ಯನವರು, ಶಿವಕುಮಾರ ಸ್ವಾಮೀಜಿಗಳು, ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚುತ್ತಾನೆಯೇ?” ಎಂದು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X