ಪಂಚಾಯತಿ ಚುನಾವಣೆಯಲ್ಲೂ ಸ್ಪರ್ಧಿಸದ ಮೋದಿಯನ್ನು ಗುಜರಾತ್ ಸಿಎಂ ಮಾಡಿದ್ಯಾರು: ಬಿಕೆ ಹರಿಪ್ರಸಾದ್

Date:

ಪಂಚಾಯತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಹಿಂದೆ ಗುಜರಾತ್‌ನ ಮುಖ್ಯಮಂತ್ರಿ ಮಾಡಿದವರು ಯಾರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಬಿಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಹರಿಪ್ರಸಾದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷದಲ್ಲಿ ದುಡ್ಡು ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್‌ಗಳು ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

“ಪಂಚಾಯತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ನರೇಂದ್ರ ಮೋದಿ ಅವರನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟ ಪಕ್ಷ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್‌ ಅವರನ್ನು ಯಾವ ಜನರು ಆಯ್ಕೆ ಮಾಡಿದ್ದಾರೆ? ‘ಜೀ’ ಗಳನ್ನು ಚುನಾವಣಾ ಚಾಣಕ್ಯ ಎಂದು ‘ಹುಜೂರು’ ಎನ್ನುವ ಕರ್ನಾಟಕ ಬಿಜೆಪಿ ರಾಜ್ಯದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ” ಎಂದು ಹೇಳಿದ್ದಾರೆ.

“ಬಿಜೆಪಿಯ ಪಾಕಿಸ್ತಾನದ ಮೇಲಿನ ಪ್ರೀತಿಯಂತೂ ನಿನ್ನೆ ಮೊನ್ನೆಯದಲ್ಲ. ಅದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ದ್ವಿರಾಷ್ಟ್ರ ಸಿದ್ದಾಂತದ ಪ್ರತಿಪಾದಿಸಿದ ಸಾವರ್ಕರ್‌ನಿಂದ ಹಿಡಿದು ಇಂದಿನ ರಸಬಾಳೆ, ಹೊಸಬಾಳೆಯ ‘ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು’ ಎನ್ನುವವರೆಗೂ ಮುಂದುವರೆಯುತ್ತಲೇ ಇದೆ” ಎಂದಿದ್ದಾರೆ.

“ಹೌದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದುತ್ವವನ್ನು ವಿರೋಧಿಸುತ್ತಲೇ ಇದ್ದೇನೆ, ವಿರೋಧಿಸುತ್ತಲೇ ಇರುತ್ತೇನೆ. ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಸ್ಪರ್ಧಿಸಿಲ್ಲ. 2001ರಲ್ಲಿ ಶಾಸಕರಾಗಿಲ್ಲದೆಯೇ ನೇರವಾಗಿ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಅದಾದ ಬಳಿಕ 2022ರಲ್ಲಿ ಗುಜರಾತ್‌ನ ರಾಜ್‌ಕೋಟ್-II ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...