ಬಿಜೆಪಿಯಲ್ಲಿ 40% ಭ್ರಷ್ಟಾಚಾರ ಇಲ್ಲವೆಂದವರು ಯಾರು : ಲಕ್ಷ್ಮಣ ಸವದಿ ಪ್ರಶ್ನೆ

Date:

  • ಮೊದಲ ಬಾರಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಬಾಯ್ಬಿಟ್ಟ ಸವದಿ
  • ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ ತೆರೆದಿಟ್ಟ ಮಾಜಿ ಡಿಸಿಎಂ

ಬಿಜೆಪಿ ಸರ್ಕಾರದಲ್ಲಿ 40% ಭ್ರಷ್ಟಾಚಾರ ಇಲ್ಲವೆಂದು ಯಾರು ಹೇಳುತ್ತಾರೆ ಹೇಳಲಿ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಅವರ ಹೇಳಿಕೆ ಈಗ ಚುನಾವಣಾ ಹೊಸ್ತಿಲಲ್ಲಿ ನಿಂತು ಮತಯಾಚನೆ ಮಾಡುತ್ತಿರುವ ಬಿಜೆಪಿ ಸರ್ಕಾರದ ಅಸಲಿ ಮುಖವನ್ನು ಅನಾವರಣಗೊಳಿಸಿದೆ.

ಸೋಮವಾರ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಲಕ್ಷ್ಮಣ ಸವದಿ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಭ್ರಷ್ಟಾಚಾರದ ಪ್ರಶ್ನೆಗೆ ಉತ್ತರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʼಬಿಜೆಪಿಯಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳ್ತಾರೆʼ ಎಂದು ಅವರು ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ ಎಂದರು.

ಇನ್ನು ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರ ಬಗೆಗೂ ಆಕ್ರೋಶ ಹೊರ ಹಾಕಿದ ಸವದಿ, ನಮ್ಮನ್ನ ಕೆಲವರು ಲೋಟ ನೀರು ಎಂದಿದ್ದಾರೆ. ಅವರಿಗೆ ನಾವು ಒಂದು ಲೋಟ ನೀರೇ ಇರಬಹುದು. ಆದರೆ ಚುನಾವಣೆ ಆದ ಬಳಿಕ ನಾವು ತಂಬಿಗೆ ನೀರೋ? ಬಕೆಟ್ ನೀರೋ? ಯಾವ ನೀರು ಅಂತ ಗೊತ್ತಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? : ಸಚಿವ ವಿ ಸೋಮಣ್ಣ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ : ಸಿದ್ದರಾಮಯ್ಯ

ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಆಡಳಿತ ಪಕ್ಷದ ನಡೆ ಖಂಡಿಸಿದ ಸವದಿ, ವಿಚಾರ ತಿರುಚಿ ಹೇಳುವ ಮೂಲಕ ಬಿಜೆಪಿಯವರು ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ವರುಣಾ ಕ್ಷೇತ್ರದಲ್ಲಿನ ಪ್ರಚಾರ ಕಾರ್ಯದ ವೇಳೆ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ವಿಚಾರದಲ್ಲಿ ಕಿಡಿಕಾರಿ, ಈಗಿರುವ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದುʼ ಎಂದಿದ್ದರು.

ಈ ಹೇಳಿಕೆ ತಿರುಚಿದ ಬಿಜೆಪಿ ಸಿದ್ದರಾಮಯ್ಯ ‘ಲಿಂಗಾಯತ ಸಮುದಾಯಕ್ಕೆ ಅವಮಾನ’ ಮಾಡಿದ್ದಾರೆ ಎಂದು ಅರೋಪಿಸಿತ್ತು. ಇದರ ಜೊತೆಗೆ ಶೆಟ್ಟರ್‌ ಹಾಗೂ ಸವದಿ ಪಕ್ಷ ಬಿಟ್ಟಿದ್ದರಿಂದ ನಮ್ಮ ಪಾರ್ಟಿಗೆ ಲಾಭವಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ....

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....