ಅದಾನಿಯನ್ನು ಬಿಜೆಪಿ, ಅಂಧಭಕ್ತರು ಯಾಕೆ ಸಮರ್ಥಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Date:

ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪದಲ್ಲಿ ಬಿಜೆಪಿಯ ನಡೆಯ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ದಾರೆ.

- Advertisement -

‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್‌ ಖರ್ಗೆ, “ಅದಾನಿ ವಿರುದ್ಧ ಅಮೇರಿಕಾ ನ್ಯಾಯಾಲಯ ಮಾಡಿರುವ ಭ್ರಷ್ಟಾಚಾರದ ಆರೋಪದ ವಿಚಾರದಲ್ಲಿಬಿಜೆಪಿ ಮತ್ತು ಅಂಧಭಕ್ತರು ಯಾಕೆ ಸಂವೇಶದನಾಶೀಲರಂತೆ ವರ್ತಿಸುತ್ತಿದ್ದಾರೆ. ಯಾಕೆ ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವ ಸಂತೋಷ್‌ ಲಾಡ್‌, “ಅದಾನಿಗೂ ಬಿಜೆಪಿಗೂ ಏನು ಸಂಬಂಧ. ಭ್ರಷ್ಟಾಚಾರ ಪ್ರಕರಣದಲ್ಲಿ ಅದಾನಿಯನ್ನು ಅರೆಸ್ಟ್‌ ಮಾಡಲು ಅಮೆರಿಕ ನ್ಯಾಯಾಲಯ ಹೇಳಿದೆ. ಆದರೆ, ಅದಾನಿಯನ್ನು ಬಿಜೆಪಿಗರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿಚಾರದಲ್ಲಿ ಅಮೆರಿಕದ ಉದ್ಯಮಿಗೆ ಬಿಜೆಪಿಗರು ಯಾಕೆ ಉತ್ತರಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅದಾನಿಗೆ ಗುಂಡಾ ಗುತ್ತಿಗೆ ಕೊಡುತ್ತಿರುವುದರಿಂದಲೇ ಅದಾನಿ ಆ ಮಟ್ಟಿಗೆ ಬೆಳೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನವೆಂಬರ್ 20 ರಂದು ಅಮೆರಿಕದ ನ್ಯೂಯಾರ್ಕ್‌ ಪೂರ್ವ ಜಿಲ್ಲೆಯ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿ ಏಳು ಮಂದಿ ವಿರುದ್ಧ ಅಂಚ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಸೌರ ವಿದ್ಯುತ್ ಒಪ್ಪಂದಗಳಿಗೆ ಅನುಕೂಲಕರ ಷರತ್ತುಗಳನ್ನು ವಿಧಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ 2,019 ಕೋಟಿ ರೂ. ಲಂಚ ನೀಡಿದ್ದಾರೆ. ಈ ಹಣವನ್ನು ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಹೇಳಿ ಸಂಗ್ರಹಿಸಿದ್ದಾರೆ. ಸುಳ್ಳು ಹೇಳುವ ಮೂಲಕ ಅಮೆರಿಕ ಉದ್ಯಮಿಗಳಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂದಿನ 20 ವರ್ಷಗಳಲ್ಲಿ ಸುಮಾರು 17,000 ಕೋಟಿ ರೂ. ಲಾಭ ದೊರೆಯುವ ಸೌರ ವಿದ್ಯುತ್‌ ಉತ್ಪಾದನಾ ಘಟಕ ಸ್ಥಾಪಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ ಲಂಚ ನೀಡಿದ್ದಾರೆ ಎಂದು ಅಮೆರಿಕ ಅರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...