ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

Date:

“ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

- Advertisement -

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ. ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಕೂಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ” ಎಂದು ಸಿಎಂ ಪ್ರಶ್ನಿಸಿದರು.

“ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಕೊಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್‌ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ” ಎಂದು ಪ್ರಶ್ನಿಸಿದರು.

“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ಎಲ್ಲರೂ ನಂಬಿದ್ದರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಎಂದು ಯುವಕರಿಗೆ ತಿಳಿಸಿದರು. ಇದು ವಿದ್ಯಾವಂತ ಯುವಕ-ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ” ಎಂದು ಪ್ರಶ್ನಿಸಿದರು.

“ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮೋದಿ ಸರ್ಕಾರ, ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನು ಓದಿದ್ದೀರಾ? ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

“ಮೋದಿ ಅವರ ದರ್ಬಾರಿನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿದೆವು. ಜಾರಿ ಮಾಡಿದೆವು. ನಾನು ನುಡಿದಂತೆ ನಡೆದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...