ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

Date:

Advertisements

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆನ್‌ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ” ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.

“ಈಗ ಪೆನ್‌ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Advertisements

ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೇ 7ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, “ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ” ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್‌ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ?” ಎಂದರು.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂಬ ಮಾತಿನ ಬಗ್ಗೆ ಕೇಳಿದಾಗ, “ಇದೆಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದೆ. ನಾನು ಕಾಂಗ್ರೆಸ್ ಅಧ್ಯಕ್ಷ . ಬಿಜೆಪಿಗರು ಗಂಟೆಗೊಂದು ಘಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವದ ಪಟ್ಟ ಬೇಡ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X