ಪ್ರಜ್ವಲ್ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ? ಡಿ ಕೆ ಶಿವಕುಮಾರ್

Date:

“ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆನ್‌ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ” ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈಗ ಪೆನ್‌ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೇ 7ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, “ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ” ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್‌ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ?” ಎಂದರು.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣದಿಂದ ದೇವೇಗೌಡರು ತುಂಬಾ ನೊಂದಿದ್ದಾರೆ: ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂಬ ಮಾತಿನ ಬಗ್ಗೆ ಕೇಳಿದಾಗ, “ಇದೆಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದೆ. ನಾನು ಕಾಂಗ್ರೆಸ್ ಅಧ್ಯಕ್ಷ . ಬಿಜೆಪಿಗರು ಗಂಟೆಗೊಂದು ಘಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವದ ಪಟ್ಟ ಬೇಡ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...