ಪರಿಶಿಷ್ಟ ಪಂಗಡಗಳ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಸುಧಾರಿಸಿಲ್ಲ?: ಅಧಿಕಾರಿಗಳಿಗೆ ಸಿಎಂ ತರಾಟೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಗೃಹ ಕಚೇರಿ ಕೃಷ್ಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಸಿಟ್ಟಾದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ” ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

“ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ” ಎಂದರು.

Advertisements

“ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಿ” ಎಂದು ಸಿಎಂ ಸೂಚನೆ ನೀಡಿದರು.

Advertisements
Bose Military School

“2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು. ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಬೇಕು” ಎಂದರು.

“ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕು” ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

63 ಕೋಟಿ ರೂ. ಖಜಾನೆಗೆ ಜಮಾ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ. ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದಾಗ, ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ ಎಂದು ತಿಳಿಸಿದರು. ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಪರಿಶಿಷ್ಟ ಪಂಗಡಗಳ‌ ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಚುನಾವಣೆ | ಎಎಪಿ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಜೊತೆ ಮೈತ್ರಿ ನಿರಾಕರಿಸಿದ ಕೇಜ್ರಿವಾಲ್

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ...

ಚೀನಾದಿಂದ ರಸಗೊಬ್ಬರ ಪೂರೈಕೆ ಸ್ಥಗಿತ, ಮೇಕ್ ಇನ್ ಇಂಡಿಯಾ- ಆತ್ಮನಿರ್ಭರ ಭಾರತ ವಿಫಲ: ಮಲ್ಲಿಕಾರ್ಜುನ ಖರ್ಗೆ

ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ...

ಕೆ ಆರ್ ಪೇಟೆ | ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿಗಿಳಿದ ಕರ್ನಾಟಕ ಪಬ್ಲಿಕ್‌ ಶಾಲೆ; ಉಲ್ಲಂಘನೆಯಾಯಿತೇ ಶಿಕ್ಷಣದ ಹಕ್ಕು?

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅನಗತ್ಯ ದಾಖಲಾತಿಗಳನ್ನು ಮಾಡಿಕೊಂಡಿದ್ದು, ಪೋಷಕರಿಂದ ವಂತಿಗೆಯ ಹೆಸರಿನಲ್ಲಿ...

ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ...

Download Eedina App Android / iOS

X