ಅದಾನಿ ಬಂಧನ ಏಕಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು: ಸಿದ್ದರಾಮಯ್ಯ ಪ್ರಶ್ನೆ

Date:

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

- Advertisement -

ಮೈಸೂರು ವಿಮಾನ‌ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ, “ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ರಾಜ್ಯದ ರೈತರಿಗೆ ಕೇಂದ್ರ ಮಾಡಿದ ಅನ್ಯಾಯ ಸರಿಯಾ?

“ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ನಾಡಿದ್ದು ಸರಿ ಎಂದು ಪ್ರಲ್ಹಾದ್‌ ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ” ಎಂದು ಪ್ರಶ್ನಿಸಿದರು.

“ರೈತರಿಗೆ ಶೇ.4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ.10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿ ಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ” ಎಂದು ಸವಾಲು ಹಾಕಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಆಹಾರ ಭದ್ರತಾ ಕಾಯ್ದೆ ನಮ್ಮದು

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಆಕ್ರೋಶಗೊಂಡ ಸಿಎಂ, “ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ

“ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು. ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...