ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

Date:

  • ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ
  • ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು

ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು ಮಾತಿಲ್ಲ, ಈ ಮಾತು ಭಜರಂಗದಳಕ್ಕೂ ಅನ್ವಯಿಸುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ತಮ್ಮ ಕೊಠಡಿ ಪೂಜೆ ನೆರವೇರಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಜರಂಗದಳದವರಿಗೆ ತಮ್ಮ ಸಂಘಟನೆ ನಿಷೇಧದ ಬಗ್ಗೆ ಅಷ್ಟೇಕೆ ಆತಂಕ ಎಂದರು.

ನಾನು ನಮ್ಮ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ವಿಚಾರವನ್ನು ಅವರು ಸರಿಯಾಗಿ ನೋಡಿ, ಓದಿ ತಿಳಿದುಕೊಳ್ಳಬೇಕು. ನಾವೆಲ್ಲೂ ಆ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಹೇಳಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯಾರು ಸಮಾಜದ ಶಾಂತಿಯನ್ನ ಕದಡುತ್ತಾರೆ, ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ. ಹೀಗಿರುವಾಗ ಅವರು ಆ ಕಾರ್ಯ ಮಾಡುವುದಿಲ್ಲ ಎಂದಾದ ಮೇಲೆ ಅವರಿಗೆ ನಿಷೇಧದ ಬಗ್ಗೆ ಚಿಂತೆ ಯಾಕೆ ಎಂದ ಅವರು, ಈ ವಿಚಾರ ಅವರಿಗೆ ಅರ್ಥವಾದರೆ ಸಾಕು ಎಂದರು.

ಈ ಮಾತುಕತೆಗೂ ಮುನ್ನ ತಮ್ಮ ಕಚೇರಿ ಪೂಜೆ ವಿಚಾರದಲ್ಲಿನ ಪ್ರಶ್ನೆಗಳಿಗೆ ಉತ್ತರಿಸಿದ ಪರಮೇಶ್ವರ್, ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ, ಅನೇಕ ಜನ ಇದಕ್ಕೆ ಟೀಕೆ-ಟಿಪ್ಪಣೆ ಮಾಡಬಹುದು. ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಂಡಿದ್ದೇವೆ. ಅದರಂತೆ ದೇವರನ್ನ ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ, ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತಹ ವಿಚಾರ ಎಂದರು.

ಈ ಸುದ್ದಿ ಓದಿದ್ದೀರಾ?:‌ ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಇಲಾಖೆ ಮತ್ತು ಜವಾಬ್ದಾರಿ ಕುರಿತು ಅಭಿಪ್ರಾಯ ಹಂಚಿಕೊಂಡ ಗೃಹ ಸಚಿವರು, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ,‌ ಪೊಲೀಸ್ ಇಲಾಖೆಯಲ್ಲಿ ಸಲ್ಯೂಟ್ ಸಿಗುತ್ತದೆ, ಒದೆನೂ ಸಿಗುತ್ತದೆ, ಮುಂದುವರಿದು ಗುಂಡು ಹಾರಿಸೋದು ಇರುತ್ತದೆ. ಆದರೆ ಯಾರಿಗೆ ಯಾವುದು ಬೇಕೋ ತೀರ್ಮಾನ ಮಾಡಿ ಎಂದರು.

ಸರ್ಕಾರದ ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಮುಖ ಖಾತೆ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಅದು ಜನತೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಇಲ್ಲಿಂದ ಒಳ್ಳೆಯ ಕೆಲಸಗಳಾಗಲಿ ಎಂದು ಆಶಿಸುತ್ತೇನೆ. ಹಾಗೆಯೇ ರಾಜ್ಯದ ಕಾನೂನು ವ್ಯವಸ್ಥೆಯನ್ನ ಮತ್ತಷ್ಟು ಬಲಗೊಳಿಸುವ ಕಾರ್ಯವನ್ನೂ ಮಾಡುತ್ತೇನೆ. ಎಂದು ಹೇಳಿದರು.

ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ವಿವರ ನೀಡಿದ ಅವರು, ಕ್ಯಾಬಿನೆಟ್ ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡ್ತಿವಿ,‌ ಇನ್ನೆರಡು ದಿನ ಕಾದು ನೋಡಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ...

ಮಂಡ್ಯ | ಕೆರಗೋಡು ಬೆನ್ನಲ್ಲೇ ಕೆ.ಆರ್​ ಪೇಟೆಯಲ್ಲಿ ಭಗವಾಧ್ವಜ ವಿವಾದ

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ...

ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...