ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಗೆ ಯಾಕೆ ಇಷ್ಟೊಂದು ಸಿಟ್ಟು, ಮತ್ಸರ: ಆರ್‌ ಅಶೋಕ್‌ಗೆ ಸಿದ್ದರಾಮಯ್ಯ ಪ್ರಶ್ನೆ

Date:

Advertisements

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. “ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ” ಎಂದಿದ್ದಾರೆ.

“ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾ 13 ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಮತಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು? ಸೋತವರು ಯಾರು? ನಮ್ಮ ಗೆಲುವಿನಿಂದ ನಾವು ತೃಪ್ತರಲ್ಲದೆ ಇದ್ದರೂ ರಾಜ್ಯದ ಜನ ಗೆಲ್ಲಿಸಿದ್ದು ನಮ್ಮನ್ನು, ಸೋಲಿಸಿದ್ದು ನಿಮ್ಮನ್ನು ಎನ್ನುವುದನ್ನು ಮರೆಯದಿರಿ” ಎಂದು ತಿರುಗೇಟು ನೀಡಿದ್ದಾರೆ.

Advertisements

“ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ನಿಮ್ಮ ಪಕ್ಷ ಕುಸಿಯುವುದನ್ನು ತಪ್ಪಿಸಲು ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ನಿಮಗೆ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ, ಆ ಮೇಲೆ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ” ಎಂದಿದ್ದಾರೆ.

“ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ಮೋದಿ ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ” ಎಂದು ಕುಟುಕಿದ್ದಾರೆ.

“ದಲಿತರ ಬಗೆಗಿನ ನಿಮ್ಮ ಕಾಳಜಿ ಎಷ್ಟೊಂದು ಹುಸಿಯಾಗಿದೆ ಎನ್ನುವುದಕ್ಕೆ ಕೇಂದ್ರ ಸಚಿವ ಸಂಪುಟವೇ ಸಾಕ್ಷಿ. ಈ ಸಂಪುಟದಲ್ಲಿ ರಾಜ್ಯದಿಂದ ಒಬ್ಬನೇ ಒಬ್ಬ ದಲಿತ ಇಲ್ಲವೆ ಹಿಂದುಳಿದ ಸಮುದಾಯದ ನಾಯಕನಿಗೆ ಅವಕಾಶ ನೀಡಿಲ್ಲ. ದೇಶದಲ್ಲಿಯೇ ಮೊದಲ ಬಾರಿ ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯನ್ನು ಜಾರಿಗೊಳಿಸಿ, ಅವರ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸಂಪನ್ಮೂಲದ ಶೇಕಡಾ 25ರಷ್ಟನ್ನು ಮೀಸಲು ಇಟ್ಟವರು ನಾವು. ನಿಮಗೆ ದಮ್ಮು-ತಾಖತ್ ಇದ್ದರೆ ಈ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಪ್ರಧಾನಿ ಮೋದಿಯವರಿಗೆ ತಿಳಿಸಿ. ಅದರ ನಂತರ ನಮ್ಮ ಬಗ್ಗೆ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎನ್ನುವುದು ನಿಜ. ಆದರೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಕಲ್ಬುರ್ಗಿ, ಮತ್ತು ರಾಯಚೂರುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೂ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಹುಬ್ಬಳ್ಳಿಯ ಅಮಾಯಕ ಹೆಣ್ಣೊಬ್ಬಳ ಹತ್ಯೆಯನ್ನು ನಿಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ಕಾರಣಕ್ಕಾಗಿ ನಮಗೆ ಆ ಭಾಗದಲ್ಲಿ ಹಿನ್ನಡೆಯಾಯಿತು. ಇಲ್ಲದೆ ಇದ್ದರೆ ನಿಮ್ಮ ಪಕ್ಷ ಒಂದಂಕಿಗೆ ಇಳಿಯುತ್ತಿತ್ತು. ನಿಮ್ಮ ದೆಹಲಿ ನಾಯಕರ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X