ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

Date:

  • ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್
  • ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ

ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೆಲವು ದಿನಗಳ ಹಿಂದೆ ನಡೆದ ಕೋಮು ಹಿಂಸಾಚಾರದ ಬಗ್ಗೆ ಕಿಡಿಕಾರಿದ್ದಾರೆ.

ರಾಮ ನವಮಿ ಸಂದರ್ಭ ಎರಡು ರಾಜ್ಯಗಳಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಕ್ರಮ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನ ತಾಳಿದ್ದಾರೆ ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯು ಈ ಹಿಂಸಾಚಾರಕ್ಕೆ ಕಾರಣವಾಗದಿರಲಿ” ಎಂದು ಮಾಧ್ಯಮವೊಂದಕ್ಕೆ ನೀಡಿದ್ದ ಹೇಳಿಕೆಯೊಂದರಲ್ಲಿ ಸಿಬಲ್ ತಿಳಿಸಿದ್ದಾರೆ.

“ಉದ್ರಿಕ್ತ ಜನರು ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬೆಂಕಿ ಹಚ್ಚುವುದನ್ನು ನಿಲ್ಲಿಸಬೇಕು. ಕೋಮು ದ್ವೇಷದ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡಬಾರದು. ಇದರಲ್ಲಿ ಸಾಮಾನ್ಯ ವ್ಯಕ್ತಿ ಬಲಿಪಶುವಾಗುತ್ತಾನೆ. ಇದು ರಾಜಕಾರಣಿಗಳಿಗೆ ಅವರ ಕಾರ್ಯತಂತ್ರ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ” ಎಂದು ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.

“ಈ ಹಿಂಸಾಚಾರ ವಿಷಯದ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು. ಇದನ್ನು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ ಈ ಹಿಂಸಾಚಾರದ ಬಗ್ಗೆ ಇಬ್ಬರೂ ಮಾತನಾಡದಿರುವುದು ದುರದೃಷ್ಟವಾಗಿದೆ. ಈ ವಿಚಾರ ಒಂದು ಪಕ್ಷಕ್ಕೆ ಸಂಬಂಧಿಸಿಲ್ಲ. ಈ ಹಿಂಸಾತ್ಮಕ ಪರಿಸರದಿಂದ ದೂರ ಉಳಿದು ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕಿದೆ” ಎಂದು ಸಿಬಲ್ ತಿಳಿಸಿದರು.

ಗೃಹ ಸಚಿವ ಅಮಿತ್ ಶಾ ಅವರು ಎರಡು ರಾಜ್ಯಗಳ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರಿಗೆ ಸೂಚಿಸಿದ್ದಾರೆ. ಆದರೆ ಇಂತಹ ಕಾಳಜಿ ಮಾತ್ರ ಸಾಲುವುದಿಲ್ಲ ಎಂದು ಕಪಿಲ್‌ ಸಿಬಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

ಬಿಹಾರದ ಬಿಹಾರ್ ಶರೀಫ್ ಮತ್ತು ಸಸಾರಾಮ್ ನಗರಗಳಲ್ಲಿ ರಾಮ ನವಮಿ ಉತ್ಸವದ ಆಚರಣೆ ವೇಳೆ ನಡೆದ ಕೋಮು ಹಿಂಸಾಚಾರ ಸಂಬಂಧ ಪೊಲೀಸರು ಇದುವರೆಗೆ 45 ಜನರನ್ನು ಬಂಧಿಸಿದ್ದಾರೆ. ಅಪಾರ ಹಾನಿ ಉಂಟಾಗಿತ್ತು. ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಅನೇಕರು ಗಾಯಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರಕ್ಕಾಗಿ ಕರ್ನಾಟಕಕ್ಕೆ 18,171 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಖರ್ಗೆ ಮನವಿ

ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್)...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪಿಒಕೆ ವಿಷಯದಲ್ಲಿ ನೆಹರು ಮಾಡಿದ್ದು ಐತಿಹಾಸಿಕ ಪ್ರಮಾದ ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ)...

ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು...