ಬಿಜೆಪಿಯವರನ್ನು ಯಾಕೆ ನಾಡದ್ರೋಹಿಗಳೆಂದು ಕರೆಯಬಾರದು: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

Date:

Advertisements

ನೆಲ,ಜಲ,ಭಾಷೆ ಮತ್ತು ಅಸ್ಮಿತೆಯ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಾಗಿರಬೇಕು. ಆದರೆ ನಾಡಿನ ಹಿತಾಸಕ್ತಿಯ ವಿಷಯದಲ್ಲಿ ಕೇಂದ್ರ ಆಟವಾಡುತ್ತಿರುವಾಗ ಬಿಜೆಪಿಯ ಒಬ್ಬನೇ ಒಬ್ಬ ನಾಯಕ ಕಡ್ಡಿ ತುಂಡಾದಂತೆ ವಿರೋಧ ಮಾಡಿದ್ದಾರೆಯೇ? ತಮ್ಮ ದೆಹಲಿ ಪ್ರಭುಗಳನ್ನು ಮೆಚ್ಚಿಸಲು ನಾಡಿನ ಹಿತಾಸಕ್ತಿಯನ್ನು ಬಲಿ ಕೊಡುತ್ತಿರುವ ಬಿಜೆಪಿಯವರನ್ನು ಯಾಕೆ ನಾಡದ್ರೋಹಿಗಳೆಂದು ಕರೆಯಬಾರದು” ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

“ಡಿ ಲಿಮಿಟೇಷನ್ (ಕ್ಷೇತ್ರ ಮರುವಿಂಗಡನೆ) ಮಾಡಲು ಹೊರಟಿರುವ ಕೇಂದ್ರದ ದಮನಕಾರಿ ನೀತಿ ವಿರೋಧಿಸಿ‌ ದಕ್ಷಿಣದ ರಾಜ್ಯಗಳೆಲ್ಲಾ ಒಟ್ಟಾಗಿ ಹೋರಾಡುತ್ತಿವೆ‌. ಡಿ ಲಿಮಿಟೇಷನ್ ಆದರೆ ಸಂಸತ್ತಿನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವೇ ಕುಸಿಯಲಿದೆ. ಇದು ಆಘಾತಕಾರಿ ಬೆಳವಣಿಗೆ” ಎಂದು ಎಕ್ಸ್‌ ತಾಣದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದಕ್ಷಿಣದ ಎಲ್ಲ ರಾಜ್ಯಗಳು ವಿರೋಧಿಸಲೇಬೇಕಿದೆ. ಆದರೆ ಡಿ‌ ಲಿಮಿಟೇಷನ್ ವಿರುದ್ಧದ ಹೋರಾಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ಕಣ್ಣಿಗೆ ರಾಷ್ಟ್ರದ್ರೋಹದಂತೆ ಕಂಡಿದೆ‌. ಮೋದಿ ಸರ್ಕಾರವನ್ನು ಮೆಚ್ಚಿಸಲು ಸ್ವಾಭಿಮಾನ, ಆತ್ಮಾಭಿಮಾನ ಬಿಟ್ಟು ಲಜ್ಜೆಗೆಟ್ಟವರಂತೆ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ಕೇಂದ್ರ ಎಸಗುತ್ತಿರುವ ಅನ್ಯಾಯ ಅರ್ಥವಾಗುವುದು ಯಾವಾಗ” ಎಂದು ಪ್ರಶ್ನಿಸಿದ್ದಾರೆ.

Advertisements

“ರಾಜ್ಯಗಳಿಗೆ ಮಾರಕವಾಗುವ ಎನ್‌ಇಪಿ ಜಾರಿಗೆ ತಂದಾಗ, ತ್ರಿಭಾಷಾ ಸೂತ್ರ ತಂದಾಗ, ಡಿಲಿಮಿಟೇಷನ್ ಮಾಡಲು ಹೊರಟಾಗ ಬಿಜೆಪಿಯವರ ನಾಲಗೆ ಹೊರಳಾಡುವುದೇ ಇಲ್ಲ. ರಾಜ್ಯಕ್ಕೆ ಏನೇ ದ್ರೋಹವಾದರೂ ಸರಿ ಮೋದಿ ಸರ್ಕಾರದ ವಿರುದ್ಧ ಬಾಯಿ ಬಿಡಬಾರದು ಎಂಬ ಅಲಿಖಿತ ನಿಯಮವೊಂದನ್ನು ರಾಜ್ಯ ಬಿಜೆಪಿ ನಾಯಕರು ಪಾಲಿಸುತ್ತಿದ್ದಾರೆ. ಇದಕ್ಕಿಂತ ಗುಲಾಮಿತನ ಇನ್ನೇನಿದೆ?” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X