ಎಲ್ಲ ಹೊಸ ತಾಲೂಕುಗಳಿಗೂ ಆಡಳಿತ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Date:

  • ಹೊಸದಾಗಿ ರಚಿಸಲಾದ 49 ತಾಲೂಕುಗಳಿಗಿಲ್ಲ ಆಡಳಿತ ಕಟ್ಟಡ
  • ಮುಂದಿನ ಎರಡು-ಮೂರು ವರ್ಷದಲ್ಲಿ ಎಲ್ಲಾ ತಾಲೂಕಿಗೂ ಅನುಮತಿ

ರಾಜ್ಯದ ಎಲ್ಲ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

- Advertisement -

ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ ಸೋಮವಾರ ವಿಧಾನ ಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೈಲಹೊಂಗಲದ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ್ ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, “2018ರಲ್ಲಿ 63 ಹೊಸ ತಾಲೂಕುಗಳನ್ನು ಘೋಷಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ 14 ತಾಲೂಕುಗಳಿಗೆ ಮಾತ್ರ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಉಳಿದ 49 ತಾಲೂಕುಗಳಿಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿರಲಿಲ್ಲ. ಮುಂದಿನ ಎರಡು-ಮೂರು ವರ್ಷದಲ್ಲಿ ಈ ಎಲ್ಲ ತಾಲೂಕುಗಳಿಗೂ ಹೊಸ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು” ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಎರಡು ದಿನಗಳಲ್ಲಿ ಶುಭ ಸುದ್ದಿ ನೀಡುತ್ತೇನೆ ಎಂದ ಕಮಲ್ ಹಾಸನ್ 

ಮುಂದುವರೆದು, “ಹೊಸ ತಾಲೂಕುಗಳಲ್ಲದೆ, ಹೆಚ್ಚುವರಿಯಾಗಿ 80 ರಿಂದ 100 ತಾಲೂಕುಗಳ ಆಡಳಿತ ಕಚೇರಿಗಳ ದುರಸ್ತಿಯಾಗಬೇಕಿದ್ದು, ಹೊಸ ಆಡಳಿತ ಕಚೇರಿಗಳ ನಿರ್ಮಾಣಕ್ಕೆ ಬೇಡಿಕೆ ಇದೆ. ಅನುದಾನದ ಲಭ್ಯತೆಯನ್ನು ನೋಡಿಕೊಂಡು ಆದ್ಯತೆಯ ಮೇರೆಗೆ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...