ಅಕಾಡೆಮಿ-ಪ್ರಾಧಿಕಾರಗಳಿಗೆ ಸಮನ್ವಯ ಸಮಿತಿ ರಚನೆ: ಕನ್ನಡ, ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ

Date:

Advertisements

“ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಅಕಾಡೆಮಿ, ಪ್ರಾಧಿಕಾರಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಎಲ್ಲ ಅಧ್ಯಕ್ಷರನ್ನೂ ಒಳಗೊಂಡ ಸಮನ್ವಯ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು” ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಕಾಡೆಮಿ-ಪ್ರಾಧಿಕಾರಗಳ ಅಧ್ಯಕ್ಷರಲ್ಲೇ ಒಬ್ಬರನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡುವ ಅಥವಾ ಸಚಿವರೇ ಅಧ್ಯಕ್ಷರಾಗುವ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ಪ್ರತಿ ತಿಂಗಳು ಕನಿಷ್ಠ ಎರಡು ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರನ್ನು ಕರೆದು ಸಭೆ ನಡೆಸಲಾಗುವುದು. ಸಂವಿಧಾನದ ಆಶಯಗಳಿಗೆ ಪೂರಕವಾಗಿ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಅಕಾಡೆಮಿಗಳ ಪತ್ರ ವ್ಯವಹಾರದಲ್ಲಿ ‘ಕರ್ನಾಟಕ’ ಎಂದು ನಾಮಕರಣಗೊಂಡ ಸುವರ್ಣ ವರ್ಷದ ಲೋಗೋ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ” ಎಂದರು.

ಡಿಸಿಎಂ‌ ಅವರ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ

“ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆ ನಡೆಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು.

“ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಸಭೆ ನಡೆಸಿ ಸಭೆ ಸೂಚನೆ ನೀಡುವ ಅಧಿಕಾರ ಇದೆ. ಅದರಲ್ಲೂ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ, ಸರ್ಕಾರದ ಘನತೆ ಹೆಚ್ಚಿಸುವಲ್ಲಿ ಸಾಹಿತಿಗಳ ಪಾತ್ರ ಕೂಡ ಮಹತ್ವವಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ ಕೆಲವೊಂದು ಸಲಹೆ ನೀಡಿದ್ದಾರೆ” ಎಂದರು.‌

“ಸಾಹಿತಿಗಳ ಬಗ್ಗೆ ನಾನು ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅನಗತ್ಯವಾಗಿ ಅದರ ಬಗ್ಗೆ ಚರ್ಚೆ ಮಾಡುವುದು ಬೇಡ.‌ ಈ ಬಗ್ಗೆ ನಾನು ರಾಜಕಾರಣ ಮಾತನಾಡಲು ಹೋಗುವುದಿಲ್ಲ. ಈ ಹಿಂದಿ‌ನ ಸರ್ಕಾರದಲ್ಲಿ ಯಾರೆಲ್ಲಾ ಎಲ್ಲಿ ಅಕಾಡೆಮಿಗಳ ಅಧ್ಯಕ್ಷರ ಸಭೆ ನಡೆಸಿದ್ದರು ಎಂಬುದನ್ನು ಹೇಳುತ್ತಾ ಹೋದರೆ ಅದು ರಾಜಕೀಯವಾಗುತ್ತದೆ. ಹೀಗಾಗಿ ಈ ವಿಚಾರದಲ್ಲಿ ರಾಜಕಾರಣಗೊಳಿಸುವುದು ಬೇಡ” ಎಂದರು.

“ಹಿಂದಿನ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ವಿವಿಧ ಪ್ರಶಸ್ತಿಯನ್ನೇ ನೀಡಿರಲಿಲ್ಲ. ಘೋಷಣೆ ಮಾಡಿದ್ದವರಿಗೂ ಪ್ರಶಸ್ತಿ ಪ್ರದಾನ ಮಾಡಿರಲಿಲ್ಲ. ನಾನು ಸಚಿವನಾದ ಬಳಿಕ‌ ಆ ಸರ್ಕಾರ ಘೋಷಣೆ ಮಾಡಿದವರಿಗೆ ಬದಲಾವಣೆ ಮಾಡದೆ ಪ್ರಶಸ್ತಿ ಪ್ರದಾನಿಸಿದ್ದೇನೆ. ಇದು ನಮ್ಮ ಸಾಂಸ್ಕೃತಿಕ ಬದ್ಧತೆ ತೋರಿಸುತ್ತದೆ” ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌: ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ

ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಹೀಗಾಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

“ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ‌ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರಕಾರ ನೇಮಿಸಬೇಕು. ಈಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ” ಎಂದರು.‌

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು...

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

Download Eedina App Android / iOS

X