ಐಎಂಎ ಹಗರಣ | ಹಣ ಕಳೆದುಕೊಂಡವರಿಗೆ ರಮ್ಜಾನ್ ಹಬ್ಬಕ್ಕೆ ಪರಿಹಾರ: ಕೃಷ್ಣ ಬೈರೇಗೌಡ

Date:

Advertisements

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಐಎಂಎ ಬಹುಕೋಟಿ ಹಗರಣ: ಅಂತೂ ಸಂತ್ರಸ್ತ ಗ್ರಾಹಕರ ಕೈಸೇರಿದ ಹಣ

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎ ನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು” ಎಂದರು.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069. ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು.

ಇದನ್ನು ಓದಿದ್ದೀರಾ? ಸ್ಟ್ಯಾಂಪ್‌ ಮತ್ತು ನೋಂದಣಿಯಿಂದ 15,145 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ: ಕೃಷ್ಣ ಬೈರೇಗೌಡ

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ. ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದರು.

ಅರ್ಹ ಸಂತ್ರಸ್ತರಿಗೆ ಹರಿಹಾರ!

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರು ಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X