ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Date:

Advertisements

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ’ ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬ್ರಿಜ್​ ಭೂಷಣ್, ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

 ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ. ಆದರೆ, ನನ್ನ ವಿರುದ್ಧ ಮಾಡಲಾಗಿರುವ ಒಂದೇ ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ ಎಂಬ ನನ್ನ ಹಿಂದಿನ ಮಾತನ್ನು ಮತ್ತೆ ಪುನರಾವರ್ತನೆ ಮಾಡುತ್ತಿದ್ದೇನೆʼ ಎಂದು ಸಿಂಗ್‌  ಹೇಳಿದ್ದಾರೆ.

Advertisements

ʻನನ್ನ ವಿರುದ್ಧದ ದೂರಿನ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಬಳಿ ಯಾವುದೇ ಪುರಾವೆಗಳಿದ್ದರೂ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ. ಆರೋಪದಲಿ ಸತ್ಯವಿದ್ದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ. ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ದನಿದ್ದೇನೆʼ ಎಂದು ಸಿಂಗ್‌ ಹೇಳಿದ್ದಾರೆ.

ಡಬ್ಲ್ಯೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಘೋಷಿಸಿದ್ದರು. ಆದರೆ ಮಂಗಳವಾರ ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯಿತ್, ನದಿಯಲ್ಲಿ ಬಿಡುವುದಕ್ಕಾಗಿ ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X