ಸನಾತನ ಧರ್ಮದ ವಿರುದ್ಧ ಮಾತನಾಡಿದರೆ ನಾಲಿಗೆ, ಕಣ್ಣು ಕೀಳಲಾಗುವುದು: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

Date:

ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ರಾಜಸ್ಥಾನದ ಬಾರ್ಮರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಪೂರ್ವಜರು ತಮ್ಮ ಪ್ರಾಣ ಒತ್ತೆಯಿಟ್ಟು ಸಂರಕ್ಷಿಸಿದ ಸನಾತನ ಧರ್ಮವನ್ನು ಕೊನೆಗೊಳಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಇನ್ನು ಅವರನ್ನು ನಾವು ಸಹಿಸುವುದಿಲ್ಲ. ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಸೀಳುತ್ತೇವೆ. ಕಣ್ಣುಗಳನ್ನು ಕೀಳುತ್ತೇವೆ’ ಎಂದು ಹೇಳಿದರು.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೊವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. “ಜಿ20 ಮುಗಿದಿದೆ ಮತ್ತು ಧಾರ್ಮಿಕ ಸ್ವಾತಂತ್ರದ 78ನೇ ಅಂಶದ ಘೋಷಣೆಗೆ ಯಾವುದೇ ಪ್ರಯೋಜನವಿಲ್ಲ ಎಂದು ನರೇಂದ್ರ ಮೋದಿ ಸಂಪುಟದ ಗೌರವಾನ್ವಿತ ಸಚಿವರು ಹಿಂಸಾಚಾರವನ್ನು ಪ್ರತಿಪಾದಿಸುತ್ತಾರೆ. ಹಾಗಾಗಿ ಈಗ ಇದು “ಮುಕ್ತ ಮಾತಾಗಿದೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ವಿರೋಧಿ ಭಾಷಣ: ಬಾಬಾ ರಾಮ್‌ದೇವ್‌ಗೆ ಪೊಲೀಸ್ ವಿಚಾರಣೆಗೆ ಹಾಜರಾಗಲು ರಾಜಸ್ಥಾನ ಹೈಕೋರ್ಟ್ ನಿರ್ದೇಶನ

ಈ ನಡುವೆ, ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಮತ್ತು ನಟ ಪ್ರಕಾಶ್ ರಾಜ್ ಅವರ ಹೇಳಿಕೆಗಳಿಗೆ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಕೂಡ ಪ್ರತಿಕ್ರಿಯಿಸಿದ್ದಾರೆ.

‘ಸನಾತನ ಧರ್ಮವನ್ನು ಕೊನೆಗಾಣಿಸುವ ಸಾಮರ್ಥ್ಯ ಯಾರಿಗೂ ಇಲ್ಲ, ಸನಾತನ ಧರ್ಮದ ಬಗ್ಗೆ ಇಂತಹ ಹೇಳಿಕೆ ನೀಡುವ ಡಿಎಂಕೆ ನಾಯಕ ಉದಯನಿಧಿ, ನಟ ಪ್ರಕಾಶ್ ರಾಜ್ ಅವರಂತಹವರು ದೇಶದ ವಿರುದ್ಧ ಮಾತನಾಡುವ ಖಳನಾಯಕರೇ ಹೊರತು ನಾಯಕರಲ್ಲ. ನಾವೇನು ಎಂಬುದರ ಬಗ್ಗೆ ಅವರಿಗೆ ಅರಿವಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಸನಾತನ ಧರ್ಮವನ್ನು ಕುಷ್ಠರೋಗ, ಮಲೇರಿಯಾ, ಡೆಂಗ್ಯೂ, ಏಡ್ಸ್‌ನಂತಹ ಕಾಯಿಲೆ ಎಂದು ಕರೆದ ಜನರು ಈ ಕಾಯಿಲೆಗಳ ನೋವನ್ನು ಅನುಭವಿಸಬೇಕು. ಇದು ದೇವರಲ್ಲಿ ನನ್ನ ಪ್ರಾರ್ಥನೆ’ ಎಂದಿದ್ದಾರೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸಭೆಯೊಂದರಲ್ಲಿ ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದರು. ಸನಾತನ ಧರ್ಮವನ್ನು ಕರೋನಾ ವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಮಲೇರಿಯಾಗೆ ಹೋಲಿಸಿದ್ದ ಅವರು, ಇಂತವುಗಳನ್ನು ವಿರೋಧಿಸಬಾರದು, ಆದರೆ ನಾಶಪಡಿಸಬೇಕು ಎಂದು ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....