2024ರ ಮಾರ್ಚ್ 17ರಂದು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಸಂಸದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಮಾ 17ರ 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಅಂದೇ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
‘ಮಾರ್ಚ್ 17ರ ನಂತರ ಯಾವುದೇ ಪಕ್ಷದ ಪರ ಪ್ರಚಾರ ಮಾಡಲ್ಲ. ಯಾವುದೇ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ. ರಾಜಕೀಯದ ಎಲ್ಲ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುವೆ’ ಎಂದು ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿಕೆ