ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ನಿರ್ಧಾರ ಪ್ರಕಟಿಸುವೆ: ವಿ ಸೋಮಣ್ಣ

Date:

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

- Advertisement -

ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತಿದೆ. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಗೋವಿಂದರಾಜನಗರ ಕ್ಷೇತ್ರವನ್ನು ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸುಲಭವಾಗಿತ್ತು ಎಂದರು.

ಚುನಾವಣೆಯಲ್ಲಿ ಸೋಲಿಗೆ ಪಕ್ಷದಲ್ಲಿರುವ ಅಸಮಾಧಾನವೇ ಕಾರಣವಾಯಿತು. ಹಿರಿಯ ಮುಖಂಡರುಗಳ ಪಕ್ಷ ವಿರೋಧಿ ಕೆಲಸದಿಂದ ನನಗೆ ಸೋಲುಂಟಾಯಿತು ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...