ಕಾಂಗ್ರೆಸ್ ಸಂಸದರಿಗೆ ‘ವಿಪ್’ ಜಾರಿ: 3 ದಿನ ಲೋಕಸಭೆಯಲ್ಲಿ ಇರುವುದು ಕಡ್ಡಾಯ

Date:

ತನ್ನ ಎಲ್ಲ ಸಂಸದರಿಗೂ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ. ಬುಧವಾರದಿಂದ ಮೂರು ದಿನ ಸಂಸತ್ತಿನಲ್ಲಿ ಕಲಾಪಗಳಲ್ಲಿ ಕಡ್ಡಾಯ ಹಾಜರಿರಬೇಕು ಎಂದು ಸೂಚಿಸಿದೆ.

- Advertisement -

ಕೇಂದ್ರ ಸರ್ಕಾರವು ಮನಗೇರಾವನ್ನು ವಿಬಿ-ಜಿ ರಾಮ್ ಜಿ ಎಂದು ಬದಲಿಸುವ ಮತ್ತು ಯೋಜನೆಯಲ್ಲಿ ಹಲವು ಜನವಿರೋಧಿ ಬದಲಾವಣೆಗಳನ್ನು ತರುವ ಮಸೂದೆ, ಭಾರತದ ನಾಗರಿಕ ಪರಮಾಣು ವಲಯ ನಿಯಂತ್ರಿಸುವ ಕಾನೂನುಗಳನ್ನು ಪರಿಶೀಲಿಸುವ ಹೊಸ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದೆ. ಈ ಮಸೂದೆಗಳ ವಿರುದ್ಧ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟವಾಗಿ ಸಂಸತ್ತಿನಲ್ಲಿ ಮಂಡಿಸಿ, ತೀವ್ರ ವಿರೋಧ ವ್ಯಕ್ತಪಡಿಸಲು ಮುಂದಾಗಿದೆ. ಆದ್ದರಿಂದ, ತನ್ನ ಸಂಸದರು ಕಡ್ಡಾಯವಾಗಿ ಮುಂದಿನ ಮೂರು ದಿನ‌ ಸದನದಲ್ಲಿ ಇರಬೇಕೆಂದು ವಿಪ್‌ ಜಾರಿಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಮತ್ತು ಪ್ರಗತಿ (ಶಾಂತಿ) ಮಸೂದೆ ರೂಪಿಸಿರುವ ಸರ್ಕಾರ, ನಾಗರಿಕ ಪರಮಾಣು ಶಕ್ತಿ ಕ್ಷೇತ್ರವನ್ನು ಖಾಸಗಿ ಸಹಭಾಗಿತ್ವದ ಹೆಸರಿನಲ್ಲಿ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಸೂದೆಯು ಪರಮಾಣು ಶಕ್ತಿ ಕಾಯ್ದೆ-1962 ಮತ್ತು ಪರಮಾಣು ಹಾನಿಯ ನಾಗರಿಕ ಹೊಣೆಗಾರಿಕೆ ಕಾಯ್ದೆ-2010 ಅನ್ನು ರದ್ದುಗೊಳಿಸುತ್ತದೆ. ಮಸೂದೆಯು ಬುಧವಾರ ಚರ್ಚೆಗೆ ಬರಲಿದೆ.

ಅಂತೆಯೇ, ಮನರೇಗಾ ಯೋಜನೆಯನ್ನು ‘ವಿಕಸಿತ್ ಭಾರತ್ ರೋಜ್ ಗಾರ್ ಆ್ಯಂಡ್ ಅಜೀವಿಕಾ ಮಿಷನ್- ಗ್ರಾಮೀಣ ಯೋಜನೆ (ವಿಬಿ ಜಿ ರಾಮ್ ಜಿ) ಎಂದು ಬದಲಿಸಿ, ಯೋಜನೆಗೆ ನಾನಾ ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಈ ಬದಲಾವಣೆಗಳು ರಾಜ್ಯ ಸರ್ಕಾರಗಳ ಮೇಲೆ ಆರ್ಥಿಕ ಹೊರೆ ಹೇರುವುದರ ಜೊತೆಗೆ, ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತದೆ.

ಈ ಎರಡೂ ಮಸೂದೆಗಳ ವಿರುದ್ಧ ಸದನದಲ್ಲಿ‌ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...